Friday, December 5, 2025
Friday, December 5, 2025

Mandya Ramesh ಮಂಡ್ಯ ರಮೇಶ್ ನೇತೃತ್ವದ ” ನಟನ” ಸಂಸ್ಥೆಯಲ್ಲಿ ರಂಗಭೂಮಿ ಡಿಪ್ಲೋಮಾ ಪಡೆಯಲು ಆಸಕ್ತರಿಗೆ ಅವಕಾಶ

Date:

Mandya Ramesh ಮೈಸೂರಿನ ಪ್ರತಿಷ್ಟಿತ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ 2025-26 (ಒಂದು ವರ್ಷದ ಅಭಿನಯ ಮತ್ತು ರಂಗ
ತರಬೇತಿ) ಪ್ರವೇಶ ಪ್ರಕ್ರಿಯೆ ಮತ್ತು ಸಂದರ್ಶನ ಮೇ ೨೫ರಂದು ನಡೆಯಲಿದೆ.
ಮಂಡ್ಯ ರಮೇಶ್ ನೇತೃತ್ವದ ನಿರಂತರ ನಟನ ರಂಗಶಾಲೆಯು ಕಳೆದ ಅನೇಕ ವರ್ಷಗಳಿಂದ ಕ್ರಿಯಾಶೀಲವಾಗಿದ್ದು, ತನ್ನ ಪ್ರದರ್ಶನಗಳ ಮೂಲಕ ಶ್ರೇಷ್ಠತೆಯನ್ನು ಸಾಧಿಸುವುದರತ್ತ ಸತತವಾಗಿ ಪ್ರಯೋಗಶೀಲವಾಗಿದೆ.
ಈ ರಂಗ ಚಟುವಟಿಕೆಯ ಭಾಗವಾಗಿ 16 ರಿಂದ 32ವರ್ಷದ ಒಳಗಿನ ಆಸಕ್ತ ಯುವಕ ಯುವತಿಯರಿಗೆ ಒಂದು ವರ್ಷದ ವಸತಿ ರಹಿತ ರಂಗಭೂಮಿ ಡಿಪ್ಲೊಮಾ ಕೋರ್ಸ್ನ್ನು ನಡೆಸುತ್ತಿದೆ.
ಪ್ರಸಕ್ತ ೨೦೨೫-೨೬ನೇ ಸಾಲಿನ ಪ್ರವೇಶ ಪ್ರಕ್ರಿಯೆ ಮತ್ತು ಅಭ್ಯರ್ಥಿಗಳ ಸಂದರ್ಶನ(ಆಡಿಷನ್)ಮೇ. 25, 2025 ರಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ.
ಪ್ರತಿದಿನ ಸಂಜೆ ೫.೩೦ರಿಂದ ೯ರ ವರೆಗೆ ತರಗತಿಗಳು ನಡೆಯಲಿದ್ದು, ಅಭಿನಯ, ರಂಗ ಸಿದ್ಧಾಂತ, ರಂಗ ಸಂಗೀತ, ಆಂಗಿಕ ಚಲನೆ, ಧ್ವನಿ ಬಳಕೆ, ಪ್ರಸಾಧನ, ಬೆಳಕು, ರಂಗ ವಿನ್ಯಾಸ, ಪರಿಕರ ನಿರ್ಮಾಣ, ರಂಗ ಇತಿಹಾಸ, ನಾಟಕ ತಯಾರಿ, ಪ್ರದರ್ಶನ.. ಹೀಗೆ ರಂಗಭೂಮಿಯ ಬೇರೆ ಬೇರೆ ಆಯಾಮಗಳ ಪರಿಚಯಾತ್ಮಕ ಪ್ರಾಯೋಗಿಕ ತರಗತಿಗಳು ನಡೆಯಲಿದೆ.
ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ದಿನಾಂಕದಂದೇ ಸಂದರ್ಶನದಲ್ಲಿ ಭಾಗವಹಿ¸ಬಹುದು.
Mandya Ramesh ರಂಗಭೂಮಿಯನ್ನು ಗಂಭೀರವಾಗಿ ಅಭ್ಯಸಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ವೆಬ್‌ಸೈಟ್ ಅಥವಾ ಕಛೇರಿಯಲ್ಲಿ ನಿಗದಿತ
ಶುಲ್ಕ ಪಾವತಿಸಿ ಅರ್ಜಿ ಪಡೆದು ಅಂಚೆ ಮುಖಾಂತರ ಅಥವಾ ನೇರವಾಗಿ ತಲುಪಿಸತಕ್ಕದ್ದು. ಆಡಿಷನ್ ಮತ್ತು ಪ್ರವೇಶಾತಿ ಕುರಿತ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಗಳು ವೆಬ್‌ಸೈಟ್ ಅಲ್ಲಿ ಲಭ್ಯವಿದೆ.
ಹೆಚ್ಚಿನ ಮಾಹಿತಿಗಾಗಿ 7259537777, 9480468327, 9845595505 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...