Sunday, December 7, 2025
Sunday, December 7, 2025

K. Venkatesh ಭದ್ರಾವತಿ ಪಶು ಆಸ್ಪತ್ರೆಗೆ ಅತ್ಯಾಧುನಿಕ ಪಾಲಿಕ್ಲಿನಿಕ್ ಮಾದರಿ ಪೂರಕ ಪರಿಕರಗಳನ್ನ ಪೂರೈಸಲಾಗಿದೆ- ಸಚಿವ ಕೆ.ವೆಂಕಟೇಶ್

Date:

K. Venkatesh ರಾಜ್ಯದಲ್ಲಿ ‌ಪಶುಪಾಲನಾ ಇಲಾಖೆಯ ಶಿಥಿಲಗೊಂಡ ಕಟ್ಟಡಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಆದ್ಯತೆಯ ಮೇರೆಗೆ 200ಸ್ಥಳಗಳಲ್ಲಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಕಳೆದ ಸಾಲಿನಲ್ಲಿ ಮಂಜೂರಾತಿ ನೀಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಕ್ರಮವಹಿಸಲಾಗಿದೆ ಎಂದು ರಾಜ್ಯ ಪಶುಪಾಲನಾ ಮತ್ತು ಪಶುವೈದ್ಯ ಸೇವೆ ಹಾಗೂ ರೇಷ್ಮೇ ಇಲಾಖೆ ಸಚಿವ ಕೆ.ವೆಂಕಟೇಶ್‌ಅವರು ಹೇಳಿದರು.
ಅವರು ಇಂದು ಭದ್ರಾವತಿ ರಂಗಪ್ಪ ಸರ್ಕಲ್‌ಸಮೀಪದಲ್ಲಿ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿನಿಧಿ ಯೋಜನೆಯಡಿ 50ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಭದ್ರಾವತಿಯ ಪಶುಪಾಲನಾ ಇಲಾಖೆಗೆ ಪಶುಗಳ ಚಿಕಿತ್ಸೆಗೆ ಪೂರಕವಾಗಿ ಅತ್ಯಾಧುನಿಕವಾದ ಪಾಲಿಕ್ಲಿನಿಕ್‌ವ್ಯವಸ್ಥೆಗೆ ಪೂರಕವಾದ ಪರಿಕರಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ನೂತನ ಕಟ್ಟಡ ನಿರ್ಮಾಣದ ನಂತರ ಅವುಗಳ ಸದ್ಭಳಕೆ ಆಗಲಿದೆ ಎಂದವರು ನುಡಿದರು.
ಪಶುಪಾಲನಾ ಇಲಾಖೆಯಲ್ಲಿ ನಿರೀಕ್ಷಿತ ಸಂಖ್ಯೆಯ ವೈದ್ಯಾಧಿಕಾರಿಗಳು, ಅಧಿಕಾರಿ-ಸಿಬ್ಬಂಧಿಗಳ ಕೊರತೆ ಇದೆ. ಮಾತ್ರವಲ್ಲ ಹೆಚ್ಚುತ್ತಿರುವ ಪಶುಗಳಿಗೆ ಪೂರಕವಾಗಿ ಆಸ್ಪತ್ರೆಗಳ ಸಂಖ್ಯೆಯೂ ಕಡಿಮೆ ಇದೆ. ಈ ಸಂಬಂಧ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು 200ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ಧಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಾಲಿಕ್ಲಿನಿಕ್‌ಗಳಿದ್ದು, ಜಾನುವಾರುಗಳ ಸಂಖ್ಯೆಗನುಗುಣವಾಗಿ ತಾಲೂಕು ಕೇಂದ್ರಗಳಿಗೂ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯದಲ್ಲಿ ಪಶುಪಾಲನಾ ಚಟುವಟಿಕೆಗಳನ್ನು ಉತ್ತೇಜಿಸಲು ಇಲಾಖೆಯ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಅದರೊಂದಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ. ‍ಸ್ಥಳೀಯ ಶಾಸಕರ ಕೋರಿಕೆಯಂತೆ ತಾಲೂಕಿನ ದೊಡ್ಡೇರಿ ಮತ್ತು ಕಲ್ಲಹಳ್ಳಿ ಗ್ರಾಮಗಳಿಗೂ ಪಶು ಆಸ್ಪತ್ರೆಗಳನ್ನು ನಿರ್ಮಿಸಲು ಅಧಿಕಾರಿಗಳಿಂದ ಜಾನುವಾರುಗಳ ಸಂಖ್ಯೆಯನ್ನು ಪಡೆದು, ಆದ್ಯತೆಯನುಸಾರ ಕ್ರಮವಹಿಸಲಾಗುವುದು ಎಂದರು.
ಕಳೆದ ಸಾಲಿನಲ್ಲಿ ಆಕಸ್ಮಿಕ ಮರಣ ಹೊಂದಿದ ಜಾನುವಾರುಗಳಿಗೆ ಕಾಮದೇನು ಆಪತ್ತು ನಿಧಿ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಧನವನ್ನು 15,000/-ರೂ.ಗಳಿಗೆ ಹೆಚ್ಚಿಸಲಾಗಿದೆ. ಮರಣ ಹೊಂದಿದ ಕುರಿಗಳಿಗೆ ನೀಡಲಾಗುತ್ತಿದ್ದ ಪರಿಹಾರಧನವನ್ನು 7500/-ರೂ.ಗಳಿಗೆ ಹೆಚ್ಚಿಸಲಾಗಿದೆ. ಹೈನೋದ್ಯಮಿಗಳಿಗೆ ಪ್ರತಿ ಲೀ.ಹಾಲಿಗೆ ನೀಡಲಾಗುತ್ತಿರುವ ಸಹಾಯಧನವನ್ನು 4/-ರೂ.ಗಳಿಗೆ ಹೆಚ್ಚಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಕೇಂದ್ರ ಪುರಸ್ಕೃತ ಯೋಜನೆಯಡಿ ಹೈನೋದ್ಯಮವನ್ನು ಉತ್ತೇಜಿಸಲು ಶ್ರಮಿಸುತ್ತಿರುವ ಸಖಿಯರಿಗೆ ಸರ್ಕಾರವು ಪ್ರತಿ ಮಾಹೆ ನೀಡಲಾಗುತ್ತಿರುವ ಸಹಾಯಧನವನ್ನು 3500/- ರೂ.ಗಳಿಂದ 5,000/-ರೂ.ಗಳಿಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.
K. Venkatesh ಇದೇ ಸಂದರ್ಭದಲ್ಲಿ ಪಶುಪಾಲನಾ ಇಲಾಖೆಗೆ ಹಲವು ದಶಕಗಳ ಹಿಂದೆ ನಗರದ ಹೃದಯಭಾಗದಲ್ಲಿ ಭೂಮಿಯನ್ನು ದಾನವಾಗಿ ನೀಡಿದ ಭೂಪಾಳಂ ಕುಟುಂಬದ ಹಿರಿಯ ಸದಸ್ಯ ಭೂಪಾಳಂ ಶಿವಸ್ವಾಮಿ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಶಾಸಕ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅ‍ಧ್ಯಕ್ಷ ಬಿ.ಕೆ.ಸಂಗಮೇಶ್ವರ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ಸದಸ್ಯೆ ಶ್ರೀಮತಿ ಬಲ್ಕಿಶ್‌ಬಾನು, ನಗರಸಭೆ ಅ‍ಧ್ಯಕ್ಷೆ ಶ್ರೀಮತಿ ಗೀತಾ ರಾಜ್‌ಕುಮಾರ್‌, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಮಣಿಶೇಖರ್‌, ಪಿ.ಎಲ್.ಡಿ.ಬ್ಯಾಂಕ್‌ಅ‍ಧ್ಯಕ್ಷ ಬಿ.ಕೆ.ಶಿವಕುಮಾರ್‌, ಶಿಮುಲ್‌ ವ್ಯವಸ್ಥಾಪಕ ಶೇಖರ್‌, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಬಾಬುರತ್ನ ಎ., ಮಂಜುನಾಥ ಪಾಳೇಗಾರ್‌, ಎಸ್.ಕುಮಾರ್‌, ಷಡಾಕ್ಷರಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಡಾ|| ಶಿವರಾಜ್‌ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ, ಪಶುವೈದ್ಯ ಡಾ.ರಾಜಶೇಖರ್‌ಡಿ.ಬಿ. ಅವರು ಸ್ವಾಗತಿಸಿ, ಡಾ|| ಮುರುಳೀಧರ್‌ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...