Dinesh Gundu Rao ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಖಾಸಗಿ ಮೆಡಿಕಲ್ ಶಾಪ್ ಗಳಿಂದ ಔಷಧಿ ಖರೀಧಿಸುವಂತೆ ಚೀಟಿ ಬರೆದುಕೊಡುವ ಸಂಸ್ಕೃತಿ ಕೈಬಿಡಬೇಕು.. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ರೋಗಿಗಳಿಗೆ ಉಚಿತವಾಗಿ ಔಷಧಿಗಳು ಸಮರ್ಪಕವಾಗಿ ದೊರೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಔಷಧಿ ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ವಹಿಸಲಾಗಿದೆ. ಎಂದು ರಾಜ್ಯದ ಆರೋಗ್ಯ ಮಂತ್ರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ
Dinesh Gundu Rao ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳನ್ನ ತೆರೆಯಲು ಸಲ್ಲಿಕೆಯಾಗಿದ್ದ 31 ಪ್ರಸ್ತಾವನೆಗಳನ್ನು ತಿರಸ್ಕರಿಸಲಾಗಿದೆ. ಜೆನರಿಕ್ ಔಷಧಿಗಳ ಖರೀದಿಗೆ BPPI ಯೊಂದಿಗೆ KSMSCL ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಲಾಗಿದ್ದು, ಪರ್ಯಾಯವಾಗಿ ಆಸ್ಪತ್ರೆಗಳು BPPI ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬಹುದು. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಔಷಧಿ ಕೇಂದ್ರಗಳಲ್ಲಿಯೇ ಔಷಧಿಗಳನ್ನು ಉಚಿತವಾಗಿ ಪಡೆಯುವಂತೆ ನಾನು ಮನವಿ ಮಾಡುತ್ತೇನೆ ಎಂದು ಸಚಿವರು ತಮ್ಮ ಜಾಲತಾಣ x ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ
