Saturday, December 6, 2025
Saturday, December 6, 2025

CM Siddaramaiah ಈ ವರ್ಷ ₹1.20.0000 ಕೋಟಿ‌ ತೆರಿಗೆ ಸಂಗ್ರಹ ಗುರಿ‌ ಸಾಧಿಸಬೇಕು – ಸಿದ್ಧರಾಮಯ್ಯ

Date:

CM Siddaramaiah ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಅವರು
ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ.

ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ.

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿ ನಿಗದಿಪಡಿಸಲಾಗಿದ್ದು, ಹೆಚ್ಚುವರಿ 17,000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ.

CM Siddaramaiah ಈ ವರ್ಷ 4,09,000 ಕೋಟಿ ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧ ಪಕ್ಷದವರು ಟೀಕಿಸಿದ್ದರು. ಆದರೆ ನಾವು ಈ ಸವಾಲನ್ನು ಯಶಸ್ವಿಯಾಗಿ ಗೆದ್ದಿದ್ದೇವೆ. ಸರ್ಕಾರದ ಈ ಯಶಸ್ಸಿನ ಹಿಂದೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ.

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ.

ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...