BHARAVATHI NEWS ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧವನ್ನು ನೀಡುತ್ತಿದ್ದು, ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಶಿಕಾರಿಪುರ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಮೇ 31ರೊಳಗಾಗಿ ಸಲ್ಲಿಸುವಂತೆ ಭದ್ರಾವತಿ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BHARAVATHI NEWS ಹೆಚ್ಚಿನ ಮಾಹಿತಿಗಾಗಿ ಭದ್ರಾವತಿ ಹಿರಿಯ ಸಹಾಯ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.
BHARAVATHI NEWS ತಾಳೆಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ. ಭದ್ರಾವತಿ ತೋಟಗಾರಿಕಾ ಕಚೇರಿ ಪ್ರಕಟಣೆ
Date: