Saturday, December 6, 2025
Saturday, December 6, 2025

DAP Fertilizer ಡಿಎಪಿ ರಸಗೊಬ್ಬರಕ್ಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಲು ಕೃಷಿ‌ ಇಲಾಖೆ ಪ್ರಕಟಣೆ

Date:

DAP Fertilizer ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಆಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಬ್ಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು, ಇವುಗಳನ್ನು ಲಘು ಪೋಷಕಾಂಶದ ಕೊರತೆಯಾದರು ಸಸ್ಯಗಳ ಬೆಳವಣೆಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.

ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದಲೇ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಆನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯುವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು, ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರೆವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿರುತ್ತದೆ.

DAP Fertilizer ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ. ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಆಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಪ್ರಸ್ತುತ ರೈತರು ಯಥೇಚ್ಛವಾಗಿ ಬಳಸುತ್ತಿರುವ ಈ ರಸಗೊಬ್ಬರಗಳ ಅನುಪಾತವು 5.08:2.89:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಿ, ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸರಿದೂಗಿಸಬಹುದಾಗಿರುತ್ತದೆ.

ಅಲ್ಲದೇ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಆಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26. 22:32:16, 14:35:14, 17:17:17, 14:28:14, 19:19:19, 20:10:10 ಇತ್ಯಾದಿ ಬಳಸಬಹುದಾಗಿದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...