International Booker Prize 2025 Winner Banu Mushtaq ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಅಂತರಾಷ್ಟ್ರೀಯ ಪ್ರತಿಷ್ಟಿತ ಬೂಕರ್ ಪ್ರಶಸ್ತಿ ಪಡೆದ ಕತೆಗಾರ್ತಿ, ಪತ್ರಕರ್ತೆ ಬಾನು ಮುಸ್ತಾಕ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್‌ರವರು, ಇದು ಕನ್ನಡದ ಹೆಮ್ಮೆ. ಇದು ಕನ್ನಡ, ಪ್ರತೀ ಕನ್ನಡಿಗ ಮತ್ತು ಇಡೀ ಕರ್ನಾಟಕ ಸಂಭ್ರಮಿಸುವ ಹೊತ್ತು. ಮುಸ್ತಾಕ್‌ರವರು ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿದ್ದಾರೆ. ಲಂಕೇಶ್ ಪತ್ರಿಕೆ ಮೂಲಕ ಪತ್ರಕರ್ತೆಯಾಗಿಯೂ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಈಗ ಕನ್ನಡದ ಹಿರಿಮೆಯ ಬಾವುಟವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ಗೌರವ ತಂದುಕೊಟ್ಟಿದ್ದಾರೆ ಎಂದಿದ್ದಾರೆ.
International Booker Prize 2025 Winner Banu Mushtaq ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಇದೇ ಅನುವಾದಿತ ಕೃತಿಗೆ `ಪೆನ್ ಟ್ರಾನ್ಸ್ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು ಎಂದು ಸ್ಮರಿಸಿ, ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಬಾನು ಮುಸ್ಥಾಕ್‌ರವರ ಕೃತಿಯನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿರವರನ್ನೂ ಅಭಿನಂದಿಸಿದ್ದಾರೆ.
International Booker Prize 2025 Winner Banu Mushtaq ಲೇಖಕಿ ಬಾನು ಮುಷ್ತಾಕ್ ಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ.ಅಭಿನಂದನೆ ಸುರಿಮಳೆ
Date: