KARNATAKA RESIDENTIAL EDUCATIONAL INSTITUTIONS SOCIETY 2025-26ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ
ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು. 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ ಮತ್ತು ಮಾಜಿ ಸೈನಿಕರ/ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಪೋಷಕರ ಮಕ್ಕಳು. ಪ.ಜಾ./ಪ.ಪಂ.ಗಳ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳು ಈ ಎಲ್ಲಾ ವಿಶೇಷ ವರ್ಗಗಳು ಅರ್ಜಿ ಸಲ್ಲಿಸಬಹುದಾಗಿದೆ.
KARNATAKA RESIDENTIAL EDUCATIONAL INSTITUTIONS SOCIETY ಆಸಕ್ತರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವೆಬ್‌ಸೈಟ್ https://kreis.karnataka.gov.in ಲಿಂಕ್‌ನಲ್ಲಿ ಅಥವಾ ನೇರವಾಗಿ ವಸತಿ ಶಾಲೆಗೆ ತೆರಳಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿ 9482300400 ನ್ನು ಸಂಪರ್ಕಿಸುವುದು.
KARNATAKA RESIDENTIAL EDUCATIONAL INSTITUTIONS SOCIETY ವಸತಿ ಶಾಲೆಗಳ ಪ್ರವೇಶಕ್ಕೆ ವಿಶೇಷ ವರ್ಗದಡಿ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ
Date:
