Monday, December 15, 2025
Monday, December 15, 2025

CEO Hemanth ಅರಿವು ಕೇಂದ್ರಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ- ಎನ್.ಹೇಮಂತ್

Date:

CEO Hemanth ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪ್ರೋತ್ಸಾಹಿಸಲು ಆರಂಭಿಸಲಾಗಿರುವ ‘ಅರಿವು’ ಕೇಂದ್ರಗಳು ಉತ್ತಮವಾಗಿ ನಡೆಯುತ್ತಿದ್ದು ಗ್ರಾಮಗಳ ಪ್ರತಿ ನಾಗರೀಕರು ಸಹ ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಇವರ ಸಹಯೋಗದಲ್ಲಿ ಶುಕ್ರವಾರ ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಚಿಣ್ಣರ ಚೆಲುವು-ಬೇಸಿಗೆ ಸಡಗರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾ.ಪಂ ವ್ಯಾಪ್ತಿಯ ಅರಿವು ಕೇಂದ್ರಗಳಲ್ಲಿ ನಡೆದ ಚಿಣ್ಣರ ಚೆಲುವು-ಬೇಸಿಗೆ ಸಡಗರ ಶಿಬಿರವು ನಾಲ್ಕು ವಾರಗಳ ಕಾಲ ಅತ್ಯುತ್ತಮವಾಗಿ ನಡೆದಿದ್ದು, ಉತ್ತಮವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಯಶಸ್ವಿಗೊಳಿಸಿದ ಗ್ರಾ.ಪಂ ಅಧಿಕಾರಿ, ಸಿಬ್ಬಂದಿಗಳು, ತಾ.ಪಂ ಇಓ, ಸಹಾಯಕ ನಿರ್ದೇಶಕರು, ಗ್ರಂಥಾಲಯ ಮೇಲ್ವಿಚಾರಕರಿಗೆ ಧನ್ಯವಾದಗಳು ಎಂದು ಅಭಿನಂದಿಸಿದರು.
ಅರಿವು ಕೇಂದ್ರಗಳಲ್ಲಿ ಅಗತ್ಯವಾಗಿ ಬೇಕಿರುವ ಮೂಲಭೂತ ಸೌಕರ್ಯಗಳ ಕುರಿತು ಗ್ರಂಥಾಲಯ ಮೇಲ್ವಿಚಾರಕರು, ವಿದ್ಯಾರ್ಥಿಗಳು, ಇತರೆ ಅಧಿಕಾರಿ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಸವಿವರವಾಗಿ ತಿಳಿಸಿದ್ದು, ಅರಿವು ಕೇಂದ್ರಗಳಲ್ಲಿ ಮಕ್ಕಳಿಗೆ ಅಗತ್ಯವಾಗಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವೆಡೆ ಹಾಗೂ ಇವುಗಳ ಅಭಿವೃದ್ಧಿ ಕಡೆ ಗಮನ ಹರಿಸುತ್ತೇವೆ ಎಂದರು.
CEO Hemanth ಅರಿವು ಕೇಂದ್ರ ಕೇವಲ ಮಕ್ಕಳಿಗೆ ಮಾತ್ರವಲ್ಲ, ಗ್ರಾಮಗಳ ಪ್ರತಿ ನಾಗರೀಕರು ದಿನ ಪತ್ರಿಕೆ, ಇತರೆ ಪುಸ್ತಕಗಳನ್ನು ಓದುವ ಮೂಲಕ ಮಾಹಿತಿ ಪಡೆಯಲು ಒಂದು ಉತ್ತಮ ಸ್ಥಳವಾಗಿದೆ. ಓದುವ ಹವ್ಯಾಸ ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದ್ದು ಮಕ್ಕಳು, ನಾಗರೀಕರ ಸಬಲೀಕರಣಕ್ಕೆ ಈ ಓದು ಸಹಕಾರ ನೀಡಲಿದೆ. 80 ವರ್ಷ ಮೀರಿದ ವೃದ್ದರೂ ಅರಿವು ಕೇಂದ್ರಗಳಿಗೆ ಭೇಟಿ ನೀಡಿ, ದಿನಪತ್ರಿಕೆಗಳು, ಇತರೆ ಪುಸ್ತಕಗಳನ್ನು ಓದುತ್ತಿರುವುದನ್ನು ಕಾಣುತ್ತಿದ್ದೇವೆ. ಮಕ್ಕಳ ಜೊತೆ ಪೋಷಕರೂ ಅರಿವು ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದರು
ಅರಿವು ಕೇಂದ್ರಗಳಿಗೆ ಇನ್ನು ಮುಂದೆ ವೇಳಾಪಟ್ಟಿಯನ್ನು ನೀಡಲಾಗುವುದು. ಮಕ್ಕಳಿಗೆ ಪಠ್ಯೇತರ ಹಾಗೂ ವೈವಿಧ್ಯಮಯ ಚಟುವಟಿಕೆಗಳು ಇಷ್ಟವಾಗುತ್ತವೆ. ಈ ನಿಟ್ಟಿನಲ್ಲಿ ವೇಳಾಪಟ್ಟಿ ಸಿದ್ದಪಡಿಸಿ, ಪ್ರತಿದಿನ ವಿಭಿನ್ನ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ಇಂತಹ ಚಟುವಟಿಕೆಗಳು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...