Monday, February 2, 2026
Monday, February 2, 2026

Siddaramaiah ಜನಾಭಿಪ್ರಾಯ ಪಡೆದೇ ರಾಮನಗರ ಜಿಲ್ಲೆ ಹೆಸರು‌ ಬದಲಾಯಿಸಲಾಗಿದೆ – ಸಿದ್ಧರಾಮಯ್ಯ

Date:

Siddaramaiah ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ?
ಮುಖ್ಯಮಂತ್ರಿ ಸಿದ್ಧರಾಮಯ್ಯನವರು
ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಹಿಂದೆ ರಾಜ್ಯದಲ್ಲಿ‌ ಆಡಳಿತ ನಡೆಸಿದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮರುಪ್ರಶ್ನೆ ಹಾಕಿದ್ದಾರೆ

ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ನಾವು ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದು ರಾಜ್ಯದಲ್ಲಿ ನಡೆದಿರುವ ಇಡಿ‌ದಾಳಿ‌ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

Siddaramaiah ರಾಜ್ಯದಲ್ಲಿ ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತಿದೆ. ಆದ್ದರಿಂದ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ.

ಸಿಂಗಾಪುರ, ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಈ ಕೂಡಲೇ ಕೇಂದ್ರ ಸರ್ಕಾರ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಕಾರಣಕ್ಕಾಗಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ರವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದು ರಾಜಕೀಯಪ್ರೇರಿತ ನಡೆ. ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪಲ್ಲ ಎಂದು ಡಿ. ಕೆ .ಶಿವ ಕುಮಾರ್ ಮತ್ತು ಡಿ. ಕೆ‌.ಸುರೇಶ್ ಪರ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...