Friday, December 5, 2025
Friday, December 5, 2025

CM Siddharamaiah ಕೋವಿಡ್ ನಿಯಂತ್ರಣ ಸೀಎಂ ಸಿದ್ಧರಾಮಯ್ಯ ಉನ್ನತ ಮಟ್ಟದ ಸಭೆ. ಅಧಿಕಾರಿಗಳಿಗೆ ಸೂಚನೆ

Date:

CM Siddharamaiah ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಾ.26-5-25 ರಂದು ಸಭೆ ನಡೆಸಿ, ನೀಡಿದ ಸೂಚನೆಗಳು..
ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು
ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ
62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ
ಸಂಖ್ಯೆ ಒಂದು ಮಾತ್ರ ಇದೆ.

  • CM Siddharamaiah ಎಸ್‌ಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ.
    ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ
    56 ಪ್ರಕರಣಗಳು ವರದಿಯಾಗಿವೆ.
  • ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
  • ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
  • ಜನರಿಗೆ ಅನುಕೂಲವಾಗುವಂತೆ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.
  • ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ
    ಹೊರಗಡೆಯಿ೦ದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು
    ಪ್ರಾರಂಭಿಸಬೇಕು.
  • ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ
    ಅನುಸರಿಸಬಾರದು. ಎಲ್ಲಾ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.
    ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು
    ಕಾರ್ಯ ನಿರ್ವಹಿಸಬೇಕು.
    ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ
    ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
  • ಸಾಮಾಜಿಕ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.
    ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ,
    ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು
    ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು
    ಸಜ್ಜುಗೊಳಿಸಿಟ್ಟುಕೊಳ್ಳಬೇಕು.
  • ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,
    ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.
  • ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ
    ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು
    ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
    ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ
    ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
    ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು
    ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ,
    ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
  • ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ
    ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ,
    ನೆಗಡಿ ಇರುವ ಮಕ್ಕಳನ್ನು ವಾಪಾಸ್‌ ಪೋಷಕರ ಮೂಲಕ ಮನೆಗೆ
    ಕಳುಹಿಸಬೇಕು.
  • ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...