Friday, December 5, 2025
Friday, December 5, 2025

Women and Child Development Department ಮಕ್ಕಳು ಅಬ್ದುಲ್ ಕಲಾಂ ಅವರನ್ನ ಮಾದರಿಯಾಗಿಟ್ಟುಕೊಳ್ಳಬೇಕು-ನ್ಯಾ.ಎಂ.ಎಸ್.ಸಂತೋಷ್

Date:

Women and Child Development Department ಮಕ್ಕಳು ತಮ್ಮ ಬೆಳವಣಿಗೆಗೆ ಪೂರಕವಾದ ಹೊಸ ವಿಷಯಗಳನ್ನು ತಿಳಿದುಕೊಳ್ಳುವುದು ಅತಿ ಅಗತ್ಯವಾಗಿದ್ದು, ಮಕ್ಕಳ ಬೆಳವಣಿಗೆಗೆ ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸಂತೋಷ್ ಹೇಳಿದರು.
ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಇವರ ಸಹಯೋಗದಲ್ಲಿ ಕಾಶಿಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಿದ್ದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಸೋಮವಾರ ಸರ್ಕಾರಿ ವೀಕ್ಷಣಾಲಯದಲ್ಲಿ ಚಂಡೆ ಬಾರಿಸುವ ಹಾಗೂ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು
ಮಕ್ಕಳು ತಮ್ಮ ದಿನಚರಿಯನ್ನು ಸರಿಯಾದ ಕ್ರಮದಲ್ಲಿ ನಿಭಾಯಿಸಬೇಕು. ಅದನ್ನು ಬದುಕಿಗೆ ಸೂತ್ರದಂತೆ ಅವಳಡಿಸಿಕೊಳ್ಳಬೇಕು. ಆಗ ಮಾತ್ರ ಬದುಕಿನಲ್ಲಿ ಉನ್ನತ ಮಟ್ಟಕ್ಕೆ ಹೋಗಲು ಸಾಧ್ಯ. ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ಮಾದರಿಯಾಗಿ ತೆಗೆದುಕೊಳ್ಳಬೇಕು. ಅವರಂತೆ ನೀವೆಲ್ಲಾ ಉತ್ತ್ತುಂಗಕ್ಕೆ ಏರಬೇಕು ಎಂದರು.
ಜಿ.ಪA. ಉಪ ಕಾರ್ಯದರ್ಶಿಯಾದ ಶ್ರೀಮತಿ ಸುಜಾತ ಮಾತನಾಡಿ, ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರ ಅತ್ಯಗತ್ಯ. ಮೊದಲೆಲ್ಲಾ ಬೇಸಿಗೆ ರಜೆ ಬಂದ ಕೂಡಲೇ ಅಜ್ಜಿ ಮನೆಗೆ ಹೋಗಿ ಅಲ್ಲಿನ ವಾತಾರಣದಲ್ಲಿದ್ದು, ಅಲ್ಲಿನ ದೇಸಿ ಆಟಗಳನ್ನು ಆಡುತ್ತಾ ಕಾಲ ಕಳೆಯುತ್ತಿದ್ದೆವು. ಆದರೆ ಇಂದಿನ ಮಕ್ಕಳು ಹೆಚ್ಚಾಗಿ ಮೊಬೈಲ್, ಟಿವಿಯ ಬಳಕೆಯಲ್ಲೆ ಮುಳುಗಿ ಹೋಗಿದ್ದಾರೆ. ಇದರಿಂದ ಸರಿಯಾಗಿ ಊಟ ಮತ್ತು ನಿದ್ರೆ ಮಾಡುವುದಿಲ್ಲ. ಮಕ್ಕಳಿಗೆ ಮಾನಸಿಕ ಸಮಸ್ಯೆಗಳು ಉಂಟಾಗುತ್ತಿವೆ ಎಂದರು.
ಬೇಸಿಗೆ ಶಿಬಿರದಲ್ಲಿ ಯೋಗ, ಧ್ಯಾನ, ಶ್ಲೋಕ, ಚಿತ್ರಕಲೆ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ರಂಗಕಲೆ, ಅಬಾಕಸ್‌ನಂತಹ ಸಕಾರಾತ್ಮಕ ಕಲಿಕೆಗಳು ಒಳಗೊಂಡಿದ್ದು, ಮಕ್ಕಳು ಇದರಲ್ಲಿ ಭಾಗವಹಿಸುವುದರಿಂದ ಮನೋವಿಕಾಸಕ್ಕೆ ಸಹಕಾರಿಯಾಗುತ್ತದೆ ಎಂದರು.
Women and Child Development Department ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರಾದ ಬಿ.ಹೆಚ್.ಕೃಷ್ಣಪ್ಪ ಮಾತನಾಡಿ, ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಉಪಯೋಗವಾಗುವಂತಹ ಐದು ಚಟುವಟಿಕೆಗಳನ್ನು 15 ದಿನಗಳ ಕಾಲ ನಡೆಸಲಾಯಿತು. ಶಿಬಿರದಲ್ಲಿ 108 ಮಕ್ಕಳು ನೋಂದಣಿಯಾಗಿದ್ದು, ಚಿತ್ರಕಲೆ, ಕರಕುಶಲತೆ, ಸಮೂಹ ನೃತ್ಯ, ಸಂಗೀತ, ರಂಗ ಕಲೆ, ಫೈನ್ ಮೋಟಾರ್ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಸರ್ಕಾರಿ ಶಾಲೆಯ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಆ ಮೂಲಕ ಎಲ್ಲಾ ಮಕ್ಕಳಿಗೆ ಇದರ ಸದುಪಯೋಗ ಮಾಡಿಕೊಳ್ಳಲು ಸಹಾಯಕವಾಯಿತು ಎಂದರು.
ಜಿಲ್ಲಾ ಬಾಲ ಭವನ ಸಮಿತಿಯ ಕಾರ್ಯಕ್ರಮ ಸಂಯೋಜಕರಾದ ಆರ್. ಮಂಜುಳಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ಮಕ್ಕಳು “ಮೊಬೈಲ್ ಬಿಡಿ ಪುಸ್ತಕ ಹಿಡಿ” ಎನ್ನುವ ಕಿರು ನಾಟಕವನ್ನು ಪ್ರದರ್ಶಿಸಿದರು. ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಹೆಚ್. ಉಮೇಶ್ , ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರೇಖ್ಯಾ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈತ್ರಿಕುಮಾರಿ, ಮುಖ್ಯೋಪಾಧ್ಯಾರಾದ ಹಾಲ ನಾಯಕ್, ಚಿತ್ರಕಲಾ ಹಾಗೂ ಕರಕುಶಲ ಕಲೆ ಶಿಕ್ಷಕ ಕೆ.ಎ.ವಿಶಾಲ್, ಸಂಗೀತ ಶಿಕ್ಷಕ ಅರುಣ್ ಎಸ್ ಘಾಟೆ, ನೃತ್ಯ ಶಿಕ್ಷಕಿ ಜೆ.ಕವಿತಾ ರಾಣಿ, ರಂಗಕಲೆ ಶಿಕ್ಷಕ ಯೋಗೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...