Friday, December 5, 2025
Friday, December 5, 2025

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಅಭಿಯಾನದಡಿ ಆಯ್ದ ತೋಟಗಾರಿಕೆ ಬೆಳೆ & ಅಭಿವೃದ್ಧಿಗೆ ಸಹಾಯ ಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ

Date:

National Horticulture Mission Scheme 2025-26 ನೇ ಸಾಲಿನಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಕ್ರಿಯಾ ಯೋಜನೆ ಅನುಮೋದನೆಯಾಗಿದ್ದು, ಆಸಕ್ತ ರೈತರು ಸಹಾಯಧನ ಪಡೆದು ಕೊಳ್ಳಲು ಅರ್ಜಿಯನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡಿಸಿ ಕೊಳ್ಳಲು ಕೋರಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಬಾಳೆ, ತರಕಾರಿ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (Weed Mat) ಟ್ರ್ಯಾಕ್ಟರ್, Farm gate, ಪ್ರಾಥಮಿಕ ಸಂಸರಣಾ ಘಟಕ, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಖಾದ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ಡಿಸೇಲ್ ಪಂಪ್ ಸೆಟ್ ಗೆ ಸಹಾಯಧನ, Chaff Cutter ಯಂತ್ರ, ಟ್ರ್ಯಾಕ್ಟರ್‌ ಟ್ರಾಲಿ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

  • ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ ಕೈಗೊಳ್ಳಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರ್ಯಾಕ್ಟರ್‌ ಟ್ರೈಲರ್ ಮತ್ತು ಇನ್ನಿತರೆ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಆಸಕ್ತ ರೈತರಿಂದ ಸಹಾಯಧನ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

National Horticulture Mission Scheme ಅರ್ಜಿಯನ್ನು ಸಲ್ಲಿಸಲು ತಾ.16/06/2025 ಕೊನೆಯ ದಿನಾಂಕ ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು
(ಜಿ.ಪಂ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...