Thursday, June 18, 2026
Thursday, June 18, 2026

Dinesh Gundu Rao ಶಿವಮೊಗ್ಗದ ಆಯುರ್ವೇದ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಆರೋಗ್ಯ ಸಚಿವ‌ ದಿನೇಶ್ ಗುಂಡೂರಾವ್

Date:

Dinesh Gundu Rao ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.
ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ ಬೋಧಕ ಸಿಬ್ಬಂದಿಗಳ ಕೊರತೆ ಇದೆ. ಆದ ಕಾರಣ ಬಿಎಎಂಎಸ್ ವಿದ್ಯಾರ್ಥಿಗಳ ಮಂಜೂರು ಸೀಟು 60 ಇದ್ದು, ದಾಖಲು ಸಂಖ್ಯೆ 33 ಕ್ಕೆ ಇಳಿಕೆಯಾಗಿದೆ.
Dinesh Gundu Rao ಆಯುರ್ವೇದ ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಸಹ ಇದ್ದು, ಇವರನ್ನು ನೇಮಕ ಮಾಡುವಂತೆ ಹಾಗೂ ಹೊಸದಾಗಿ ಪಿಜಿ ಕೋರ್ಸ್ ಆರಂಭಿಸಲು ಜಾಗದ ಅವಶ್ಯಕತೆ ಇದ್ದು, ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
ವಿದ್ಯಾರ್ಥಿಗಳು ಮಾತನಾಡಿ, ಬಾಲಕರ ಹಾಸ್ಟೆಲ್ ಇಲ್ಲ. ಆದ್ದರಿಂದ ಸಮಸ್ಯೆಯಾಗುತ್ತಿದೆ. ಶೀಘ್ರದಲ್ಲಿ ಹಾಸ್ಟೆಲ್‌ಗೆ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದರು. ಹಾಗೂ ಕ್ಯಾಂಟಿನ್, ವಸ್ತು ಸಂಗ್ರಹಾಲಯ, ಆಡಿಟೋರಿಯಂ, ಇಂಟರ್ನ್ಗಳಿಗೆ ಸ್ಟೆöÊಫಂಡ್ ಹೆಚ್ಚಳ ಮಾಡುಂತೆ ಕೋರಿದರು. ಮತ್ತು ವಿದ್ಯಾರ್ಥಿ ವೇತನ ಪಡೆಯುವಲ್ಲಿ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಸಮಸ್ಯೆ ಇದ್ದು ಸರಿಪಡಿಸುವಂತೆ ಮನವಿ ಮಾಡಿದರು.
ಸಚಿವರು ಪ್ರತಿಕ್ರಿಯಿಸಿ, ಬೋಧಕ ಸಿಬ್ಬಂದಿ, ಸ್ಟಾಫ್ ನರ್ಸ್ ನೇಮಕಾತಿ, ಪಿಜಿ ಕೋರ್ಸ್ ಆರಂಭಿಸಲು ಜಾಗ ನೀಡುವ ಕುರಿತು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲೆಯಲ್ಲಿ 35 ಆಯುಷ್ ಕೇಂದ್ರಗಳಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಕೇಂದ್ರಗಳಿಗೆ ಸಂಬAಧಿಸಿದAತೆ ಜಾರಿ ಮಾಡಲಾದ ಹೊಸ ಮಾರ್ಗಸೂಚಿಯನ್ನು ಆಯುಷ್ ಇಲಾಖೆ ಪಾಲನೆ ಮಾಡಬೇಕು ಎಂದರು.
ಆಯುರ್ವೇದ ಆಸ್ಪತ್ರೆಗೆ ಹೆಚ್ಚುವರಿ ನೀರಿನ ಸಂಪರ್ಕ ಅಗತ್ಯವಿದ್ದು, ಶೀಘ್ರವೇ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸಹ ಶೀಘ್ರದಲ್ಲೇ ಪೂರೈಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಕಳೆದ ಸಾಲಿನಲ್ಲಿ ರ‍್ಯಾಂಕ್ ಪಡೆದ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ, ಅಭಿನಂದಿಸಿದರು.
ಸಭೆಯಲ್ಲಿ ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್, ಮಾಜಿ ವಿಧಾನಪರಿಷತ್ ಶಾಸಕ ಪ್ರಸನ್ನಕುಮಾರ್, ಮಾಜಿ ಪಾಲಿಕೆ ಸದಸ್ಯ ಯೋಗೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಿಂಗರಾಜು, ಕಾಲೇಜಿನ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...