Sunday, December 14, 2025
Sunday, December 14, 2025

B.Y.Raghavendra ಅನ್ನ ನೀಡುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ : ಬಿ.ವೈ.ರಾಘವೇಂದ್ರ

Date:

B.Y.Raghavendra ರೈತರು ವರ್ಷವಿಡೀ ಶ್ರಮಪಟ್ಟು ಎಲ್ಲರಿಗೂ ಅನ್ನ ನೀಡುತ್ತಾರೆ. ಇಂತಹ ಪುಣ್ಯದ ಕೆಲಸ ಮಾಡುತ್ತಿರುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಇವರ ವತಿಯಿಂದ ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ದ ಅಂಗವಾಗಿ ಹೊಳಲೂರು ಗ್ರಾಮದಲ್ಲಿ ಏರ್ಪಡಿಸಿರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕಾರ್ಯಾಗಾರಕ್ಕೆ ಗುರುವಾರ ಅವರು ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದಲ್ಲಿ ಶೇ.5 ರಷ್ಟು ಸರ್ಕಾರಿ ನೌಕರರು, ಶೇ.20 ರಷ್ಟು ಖಾಸಗಿ ನೌಕರರಿದ್ದರೆ ಉಳಿದ ಶೇ.75 ಅನ್ನದಾತ ರೈತಾಪಿ ವರ್ಗವಿದೆ. ಇಂತಹ ರೈತರಿಗಾಗಿ ಪ್ರಧಾನ ಮಂತ್ರಿಗಳು ಮುಂಗಾರು ಹಂಗಾಮಿಗೆ ಆಧುನಿಕ ಕೃಷಿ ಚಟುವಟಿಕೆಗಳ ಕುರಿತು ರೈತರಿಗೆ ಮಾಹಿತಿ ನಿಡಲು ವಿಜ್ಞಾನಿಗಳನ್ನು ದೇಶದಾದ್ಯಮತ ರೈತರ ಕಡೆ ಕಳುಹಿಸಬೇಕೆಂಬ ಉದ್ದೇಶವನ್ನು ಹೊಂದಿರುವುದು ಕೃಷಿ ವಲಯದಲ್ಲಿ ಬೃಹತ್ ಮಟ್ಟದ ಹೆಜ್ಜೆಯಾಗಿದೆ. ಈ ನಿಟ್ಟಿನಲ್ಲಿ ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ, ಭಾರತೀಯ ಕೃಷಿ ಸಂಶೋಧನಾ ಮಂಡಳಿ, ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳನ್ನು ಒಳಗೊಂಡ ತಂಡವು ಹೊಳಲೂರು ಗ್ರಾಮಕ್ಕೆ ಬಂದು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.
B.Y.Raghavendra ಕೇಂದ್ರ ಸರ್ಕಾರ ಸುಮಾರು 1.27 ಲಕ್ಷ ಸಾವಿರ ಕೋಟಿ ಅನುದಾನ ನೀಡಿ, ರೈತರಿಗೆ ಸಹಾಯ ಮಾಡುತ್ತಿದ್ದು ಸುಮಾರು 27 ಲಕ್ಷ ಸಾವಿರ ರೈತರಿಗೆ ಮಣ್ಣು ಆರೋಗ್ಯ ಚೀಟಿ ನೀಡಿದೆ. ರೂ.2500 ಲಕ್ಷಗಳನ್ನು ಬೀಜ ಅಭಿವೃದ್ದಿ ಮಾಡಲು ಮೀಸಲಿಡಲಾಗುತ್ತಿದೆ. ನೈಸರ್ಗಿಕ ಕೃಷಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕಿಸಾನ್ ಕ್ರೆಡಿಟ್ ಕಾರ್ಡ್, ಗೊಬ್ಬರ ಸಬ್ಸಿಡಿ, ಕೃಷಿಯಲ್ಲಿ ಡ್ರೋನ್ ಬಳಕೆಯಂತರ ಯೋಜನೆಗಳನ್ನು ರೂಪಿಸಿ, ರೈತರಿಗೆ ನೆರವಾಗುತ್ತಿದೆ. ಈ ವಿಕಸಿತ ಕೃಷಿ ಸಂಕಲ್ಪ ಅಭಿಯಾನದಿಂದ ರೈತರು ಇನ್ನಷ್ಟು ಉತ್ಪಾದನೆ ಮಾಡಲು ಸಹಾಯವಾಗಿದೆ ಎಂದು ತಿಳಿಸಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ಮಾತನಾಡಿ, ಈ ಅಭಿಯಾನದಲ್ಲಿ ಸುಮಾರು 18000 ರೈತರಿಗೆ ನೇರವಾಗಿ ಮಾಹಿತಿ ನೀಡಲಾಗುತ್ತಿದೆ. ನಮ್ಮ ದೇಶದ ಶ್ರಮಜೀವಿ ರೈತ ಬಾಂಧವರಿಗಾಗಿ ಈ ಮಂಗಾರು ಹಂಗಾಮಿನಲ್ಲಿ ವಿಶ್ವವಿದ್ಯಾಲಯದ ಕೃಷಿ ಕಾಲೇಜು ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳ ಕುರಿತ ಮಾಹಿತಿ, ಸಮಗ್ರ ಕೃಷಿ ಪದ್ದತಿ, ಜಾನುವಾರು ಸಾಕಾಣಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ಜೇನು ಸಾಕಾಣಿಕೆ ಇತ್ಯಾದಿಗಳನ್ನೊಳಗೊಂಡಂತೆ ರೈತರಿಗ ಅರಿವು ಮೂಡಿಸಲಾಗುವುದು. ಮಣ್ಣಿನ ಆರೋಗ್ಯ ಕಾರ್ಡ್ ಆಧಾರಿತ ಸಮತೋಲಿತ ರಸಗೊಪ್ಪಬರಗಳ ಬಳಕೆ, ಬೆಳೆಗಳ ಆಯ್ಕೆ, ಸುಧಾರಿತ ತಳಿಗಳು, ಬೀಜೋಪಚಾರ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುತ್ತಿದೆ. ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಬೇಕೆಂದು ತಿಳಿಸಿದರು.
ಕಾಯಕ್ರಮದಲ್ಲಿ ಹೊಳಲೂರು ಗ್ರಾ.ಪಂ ಅಧ್ಯಕ್ಷೆ ರಮ್ಯ ಮಧು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್ ಕುಮಾರ್, ಕೆವಿಕೆ ಮುಖ್ಯಸ್ಥ ಡಾ.ಸುನಿಲ್ ಸಿ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ , ಡಾ.ಜಿ.ಕೆ ಗಿರಿಜೇಶ್, ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಜಿ, ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಗಿರೀಶ್ ಓ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಬಾಬುರತ್ನ ಎ, ಡಾ.ಎಸ್.ಪ್ರದೀಪ್, ಡಾ.ಬಿ.ಸಿ ಹನುಮಂತಸವಾಮಿ, ದೇವರಾಜ್, ಉಲ್ಲಾಸ್ ಮೆಸ್ತ, ರೈತರ ಉತ್ಪಾದಕ ಸಂಸ್ಥೆಗಳ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರುಗಳು, ರೈತರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...