CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Dash Board ಬಿಡುಗಡೆಗೊಳಿಸಿದರು. ಕರ್ನಾಟಕ ಪ್ರಗತಿ ಪೋರ್ಟಲ್(DASH BOARD)
ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಸರ್ಕಾರದ ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಸರ್ಕಾರ ಯಶಸ್ವಿಯಾಗಿರುವ ಪಕ್ಷಿನೋಟವನ್ನು ಈ ಪೋರ್ಟಲ್‌ನಲ್ಲಿ ಪ್ರದರ್ಶಿಸಲಾಗಿದೆ.
ಮಹಾತ್ಮ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ಸರ್ಕಾರ ಹಮ್ಮಿಕೊಂಡಿರುವ ಮಹತ್ವಕಾಂಕ್ಷೆಯ ಕಲ್ಯಾಣ ಯೋಜನೆಗಳಿಂದಾಗಿ ಪ್ರತಿಯೊಂದು ವಲಯದಲ್ಲಿಯೂ ರಾಜ್ಯವು ಉತ್ತಮವಾದ ಸಾಧನೆಗಳನ್ನು ದಾಖಲಿಸಿದೆ.
ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದ್ದು, ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ ತೀವ್ರತೆ ಕಡಿಮೆಯಾಗುತ್ತಿದೆ.
CM Siddaramaiah ಈ ಪೋರ್ಟಲ್ ಮೂಲಕ ರಾಜ್ಯದ ಜನತೆಗೆ ಪಾರದರ್ಶಕವಾಗಿ ಪ್ರತಿ ಕ್ಷಣ ಪ್ರಗತಿ ಸೂಚ್ಯಂಕಗಳನ್ನು ಪ್ರದರ್ಶಿಸಲಾಗಿದೆ. ಜನಸ್ನೇಹಿ ಆಡಳಿತವನ್ನು ಒದಗಿಸಲು ಸಮಯ ಬದ್ಧ ಸೇವೆಗಳು, ಸಾರ್ವಜನಿಕ ಕುಂದು-ಕೊರತೆಗಳ ನಿರ್ವಹಣೆ, ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ನೀಡಲಾಗುತ್ತಿರುವುದರೊಂದಿಗೆ ಉದ್ಯೋಗ ಸೃಷ್ಟಿ, ವಿವಿಧ ಕಲ್ಯಾಣ ಕಾರ್ಯಕ್ರಮಗಳ ಕೋಟ್ಯಾಂತರ ಫಲಾನುಭವಿಗಳ ಪೈಕಿ ವಿಶೇಷವಾಗಿ 5 ಗ್ಯಾರಂಟಿ ಯೋಜನೆಗಳ ಆರ್ಥಿಕ ಭೌತಿಕ ವಿವರಗಳನ್ನು ಈ ತಂತ್ರಾಂಶದ ಮೂಲಕ ಒಂದೇ ವೇದಿಕೆಯಲ್ಲಿ ಲೋಕಾರ್ಪಣೆ ಮಾಡಲಾಗಿದೆ.
ಅಲ್ಲದೆ, ನ್ಯಾಯಾಲಯದಲ್ಲಿ ಇರುವ ಪ್ರಕರಣಗಳನ್ನು ವೇಗವಾಗಿ ವಿಲೇವಾರಿ ಮಾಡುವ ಮೂಲಕ ನಾಗರಿಕರಿಗೆ ತುರ್ತು ಕಾನೂನಾತ್ಮಕ ಪರಿಹಾರಗಳನ್ನು ಸಹ ಒದಗಿಸುವಲ್ಲಿ ರಾಜ್ಯ ಅಗ್ರಗಣ್ಯ ಸ್ಥಾನದಲ್ಲಿದೆ.