Health and Family Welfare ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ
ಮುಂಜಾಗ್ರತಾ ಕ್ರಮಗಳ ಬಗ್ಗೆ. ಸನ್ಮಾನ್ಯ ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ: 26.5.2025 ರಂದು ನಡೆದ
ಕೋವಿಡ್ – 19 ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಈ ಕೆಳಕಂಡಂತೆ ಸೂಚಿಸಲಾಗಿದೆ.
Health and Family Welfare ಪ್ರಸ್ತುತ, ರಾಜ್ಯದ ಕೋವಿಡ್
19 ಪರಿಸ್ಥಿತಿ ಹಾಗೂ ಜೂನ್ ತಿಂಗಳಿನಲ್ಲಿ ಶಾಲೆಗಳು
ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ
ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ.
- ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ,
ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ, ಸೂಕ್ತ ಚಿಕಿತ್ಸೆ ಹಾಗೂ ಆಫ್ರಿಕಾ
ಕ್ರಮಗಳನ್ನು ಪಾಲಿಸುವುದು. - ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ
ಕಳುಹಿಸುವುದು. - ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ
ಮಾಹಿತಿಯನ್ನು ನೀಡಿ ಅಂತಹ ಮಕ್ಕಳನ್ನು ಮನೆಗೆ ಕಳುಹಿಸುವುದು. - ಮುಂದುವರೆದು, ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು,
ನೆಗಡಿ ಹಾಗೂ ಇತರ ಲಕ್ಷಣಗಳು ಕಂಡು ಬಂದಲ್ಲಿ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು
ಪಾಲಿಸುವಂತೆ ಸೂಚಿಸುವುದು. - ಆದಾಗ್ಯೂ, ಮಂಜಾಗ್ರತಾ ಕ್ರಮಗಳಾದ ಕೈಗಳ ಸ್ವಚ್ಛತೆ, Cough Etiquette ಇತ್ಯಾದಿ Covid
19 Appropriate Behaviour (CAB) ನ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು.
ಒಟ್ಟಾರೆಯಾಗಿ, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ – 19
ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ ಎಂದು
ಆಯುಕ್ತರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪ್ರಕಟಣೆ ತಿಳಿಸಿದೆ.