Dinesh Gundu Rao ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಜಯಚಾಮರಾಜೇಂದ್ರ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.. ತೀರ್ಥಹಳ್ಳಿಗೆ MCH ಆಸ್ಪತ್ರೆ ನೀಡಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರ ಬಳಿ ಚರ್ಚಿಸಿದ್ದು, ಶೀಘ್ರದಲ್ಲೇ ಆಸ್ಪತ್ರೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
Dinesh Gundu Rao ನಮ್ಮ ಸರ್ಕಾರ ಬಂದ ಮೇಲೆ ಡಯಾಲಿಸಿಸ್ ಕೇಂದ್ರಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಜನರಿಗೆ ಉತ್ತಮ ಆರೋಗ್ಯ ಸೇವೆಗಳ ಒದಗಿಸಲಾಗುತ್ತಿದೆ. ಇದರ ಜೊತೆಗೆ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.
