Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಅವರ ಮನೋಸಾಮರ್ಥ್ಯ ವೃದ್ಧಿಯಾಗುತ್ತದೆ. ರಾಜ್ಯಮಟ್ಟದ ರ‍್ಯಾಲಿಗಳಿಂದ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಉತ್ತಮ ಅವಕಾಶ ಲಭಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ, ಮಾಜಿ ಗೃಹಮಂತ್ರಿ ಪಿಜಿಆರ್ ಸಿಂಧ್ಯಾ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಜಿಲ್ಲಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಜ್ಯಮಟ್ಟದ ಮುಕ್ತದಳದ ರ‍್ಯಾಲಿಯಲ್ಲಿ ಮಾತನಾಡಿ, ಅತ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ. ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ನಡೆದಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ತರಬೇತುದಾರರಿಗೆ ಅಂತರಾಷ್ಟ್ರೀಯ ಮಟ್ಟದ ವಿಶೇಷ ತರಬೇತಿ ನೀಡಲು ರಾಜ್ಯ ಸಂಸ್ಥೆ ಸಜ್ಜಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಅನೇಕ ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಸಮಾಜಮುಖಿ ಕಾರ್ಯಗಳ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡುತ್ತಿದೆ. ಮಕ್ಕಳಿಗೆ ಶಿಕ್ಷಣದ ಜತೆ ಇಂತಹ ಚಟುವಟಿಕೆಗಳು ಅತ್ಯಂತ ಅವಶ್ಯಕ ಎಂದು ಹೇಳಿದರು.
ರಾಜ್ಯದ ವಿವಿಧೆಡೆಯಿಂದ 250ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದರು. ವಸ್ತು ಪ್ರದರ್ಶನವನ್ನು ಕೆ.ವಿ.ಶ್ಯಾಮಲಾ ಉದ್ಘಾಟಿಸಿದರು. ಸಾಹಸ ಚಟುವಟಿಕೆಗಳನ್ನು ಎನ್.ಆರ್.ಅಚಿ ಪ್ರಕಾಶ್ ಉದ್ಘಾಟಿಸಿದರು.
Bharat Scouts and Guides ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ರಾಜ್ಯ ಘಟಕದ ಆಯುಕ್ತರ ಸಲಹೆ, ಮಾರ್ಗದರ್ಶನದ ಮೇರೆಗೆ ಮೂರು ದಿನಗಳ ವಿಶೇಷ ರ‍್ಯಾಲಿ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಕೆ.ರವಿ, ಚೂಡಾಮಣಿ ಪವಾರ್, ಕಾರ್ಯದರ್ಶಿ ಕೆ.ವಿ.ಚಂದ್ರಶೇಖರ್, ಎಸ್.ಜಿ.ಆನಂದ್, ಶಿವಶಂಕರ್, ಪರಮೇಶ್ವರಯ್ಯ, ರಾಜೇಶ್ ಅವಲಕ್ಕಿ, ಲಕ್ಷ್ಮೀ ರವಿ, ದೊರೆ, ವೈ.ಆರ್.ವೀರೇಶಪ್ಪ, ಕೃಷ್ಣ ಸ್ವಾಮಿ, ರಾಘವೇಂದ್ರ, ಶ್ರೀನಿವಾಸ ವರ್ಮ, ಗೀತಾ ಚಿಕಮಠ್, ಕಾತ್ಯಾಯಿನಿ, ಗೀತಾ ನಟರಾಜ್, ರಾಜ್ಯ ಸಂಸ್ಥೆ ಹಾಗೂ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಅವರ ಮನೋಸಾಮರ್ಥ್ಯ ವೃದ್ಧಿ:ಪಿಜಿಆರ್ ಸಿಂಧ್ಯಾ
Date: