Shivaganga Yoga Center ನಾವುಗಳು ಉತ್ತಮ ಆರೋಗ್ಯ ಸಾಮರಸ್ಯ ಶಾಂತಿ ನೆಮ್ಮದಿಗಾಗಿ. ಪ್ರತಿನಿತ್ಯ ಯೋಗ ಪ್ರಾಣಾಯಾಮ ಧ್ಯಾನ ಮಾಡಲೇಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರು ಅಭಿಮತ ವ್ಯಕ್ತಪಡಿಸಿದರು
ಶ್ರೀ ಶಿವಗಂಗಾ ಯೋಗ ಕೇಂದ್ರ. ಜಿಲ್ಲಾ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಶಮಾನೋತ್ಸವದ ಅಂಗವಾಗಿ ಸರ್ಕಾರಿ ನೌಕರರ ವಿಕಾಸ ಕೇಂದ್ರ ಬಸವನಗುಡಿಯಲ್ಲಿ ಹಮ್ಮಿಕೊಳ್ಳಲಾದ 15 ದಿನಗಳ
ಉಚಿತ ಯೋಗಾಸನ ಪ್ರಾಣಯಾಮ ಹಾಗೂ ಧ್ಯಾನ ಮತ್ತು ಆರೋಗ್ಯ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಒತ್ತಡದ ಪ್ರಪಂಚದಲ್ಲಿ ಯೋಗ ನಮ್ಮ ಮನಸ್ಸನ್ನು ನಿಯಂತ್ರಣದಲ್ಲಿರುತ್ತದೆ ಇಂದು ಚಿಕ್ಕ ಚಿಕ್ಕ ವಯಸ್ಸಿನಲ್ಲಿ ಹೃದಯದಿಂದ ಸಾಕಷ್ಟು ಜನ ನಿಧನರಾಗುತ್ತಿದ್ದಾರೆ ಈ ನಿಟ್ಟಿನಲ್ಲಿ ಆರೋಗ್ಯದ ಮುಂದೆ ಬೇರೆ ಯಾವ ಸಂಪತ್ತು ಇಲ್ಲ ಪ್ರತಿನಿತ್ಯ ನಾವು ಯೋಗ ಅಭ್ಯಾಸ ಮಾಡುವುದರ ಜೊತೆಗೆ ಉತ್ತಮ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು .
ರಾಷ್ಟ್ರ ಪ್ರಶಸ್ತಿ ಹಾಗೂ ರಾಜುೋತ್ಸವ ಪ್ರಶಸ್ತಿ ಪುರಸ್ಕೃತರಾದ ಯೋಗಾಚಾರ್ಯ ಸಿವಿ ರುದ್ರಾರಾಧ್ಯ ರವರು ಶಿಬಿರದ ನೇತೃತ್ವವನ್ನು ವಹಿಸಿ ಮಾತನಾಡುತ್ತಾ ಯೋಗದಿಂದ ಮಾನಸಿಕ ಹಾಗೂ ದೈಹಿಕ ಸದೃಢತೆಯ ಜೊತೆಗೆ ನಮ್ಮ ದೇಹದಲ್ಲಿ ಇರುವ ಸಣ್ಣ ಪುಟ್ಟ ಖಾಯಿಲೆಗಳು ನಮಗೆ ಗೊತ್ತಿಲ್ಲದ ಹಾಗೆ ಮಾಯವಾಗುತ್ತವೆ ಪ್ರತಿನಿತ್ಯ ಯೋಗ ಅಭ್ಯಾಸದಿಂದ ದೀರ್ಘಾಯುಷ್ಯ ಉಳ್ಳವರಾಗುತ್ತೇವೆ ಹಾಗೂ ಮುಖದಲ್ಲಿ ಸದಾ ಕಾಂತಿ ಇರುತ್ತದೆ ಈ ನಿಟ್ಟಿನಲ್ಲಿ ಪ್ರತಿ ಮನೆ ಮನೆಗಳಿಗೂ ಸಹ ಯೋಗವನ್ನು ತಲುಪಿಸುವ ನಿಟ್ಟಿನಲ್ಲಿ ಎಲ್ಲಾ ಬಡಾವಣೆಗಳಲ್ಲೂ ಸಹ ನಮ್ಮ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾದ ಎಸ್ ರುದ್ರೇಗೌಡರ ಮಾರ್ಗದರ್ಶನದ ಮುಖಾಂತರ ಎಲ್ಲಾ ಬಡಾವಣೆಗಳಲ್ಲೂ ಹಮ್ಮಿಕೊಳ್ಳಲು
ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಬಡಾವಣೆ ನಿವಾಸಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಆರ್ ಮೋಹನ್ ಕುಮಾರ್ ಅವರು ಮಾತನಾಡುತ್ತಾ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಯೋಗವನ್ನು ಸಹ ನಾವು ಸೇರಿಸಿ ಅದರ ಬಗ್ಗೆಯೂ ಸಹ ಜಾಗೃತಿಯನ್ನು ಮೂಡಿಸಿದ್ದೇವೆ ಆದ್ದರಿಂದ ಇಲ್ಲಿ ನಿರಂತರವಾಗಿ ಯೋಗವನ್ನು ನಡೆಸಲು ನಮ್ಮ ಸಂಪೂರ್ಣ ಸಹಕಾರವಿದೆ ಎಂದು ನುಡಿದರು.
Shivaganga Yoga Center ಶಿವಗಂಗಾ ಯೋಗ ಕೇಂದ್ರದ ಟ್ರಸ್ಟಿ ಗಳಾದ. ಕೆ ಕಾಂತೇಶ್ ಅವರು ಮಾತನಾಡುತ್ತ ಈಗಾಗಲೇ ಶಿವಮೊಗ್ಗ ನಗರದಲ್ಲಿ 35 ಕೇಂದ್ರಗಳಲ್ಲಿ ಉಚಿತವಾಗಿ ಯೋಗ ಶಿಕ್ಷಣ ನಡೆಯುತ್ತಿದ್ದು ಇಂದು 36ನೇ ಕೇಂದ್ರ ಪ್ರಾರಂಭವಾಗಿದೆ. ಇಂತಹ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾದ ಎಸ್ ರುದ್ರೇಗೌಡರು ವಹಿಸಿ ಮಾತನಾಡುತ್ತ ನಮ್ಮ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಆಶಯದಂತೆ 180ಕ್ಕೂ ಹೆಚ್ಚು ದೇಶಗಳು ಯೋಗವನ್ನು ಒಪ್ಪಿ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದಾರೆ ಅದರಲ್ಲಿ 44 ಮುಸ್ಲಿಂ ರಾಷ್ಟ್ರಗಳು ಸಹ ಯೋಗಭ್ಯಾಸವನ್ನು ಒಪ್ಪಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ನಮ್ಮ ಶಿವಗಂಗಾ ಯೋಗ ಕೇಂದ್ರ ಪ್ರಾರಂಭವಾಗಿ 15 ವರ್ಷಗಳು ಕಳೆದಿವೆ. ಈ ನಿಟ್ಟಿನಲ್ಲಿ ಅನೇಕ ಯೋಗದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಯೋಗ ಶಿಕ್ಷಕರಾದ ಕಾಟನ್ ಜಗದೀಶ್ ಕಾರ್ಯಕ್ರಮವನ್ನ ನಿರೂಪಿಸಿದರು ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಜಿ ಸುಮತಿ ಕುಮಾರಸ್ವಾಮಿ
ಯೋಗ ಶಿಕ್ಷಕರಗಳಾದ ಜಿಎಸ್ ಓಂಕಾರ್. ನೀಲಕಂಠ ರಾವ್. ಹರೀಶ್. ವಿಜಯ ಕೃಷ್ಣ. ಬಾಳೆಕಾಯಿ ಮೋಹನ್ ಶ್ರೀಮತಿ ವಿಜಯ ಬಾಯರ್. ಜಿ ವಿಜಯಕುಮಾರ್ ಶ್ರೀಮತಿ ನಾಗರತ್ನ ಚಂದ್ರಶೇಖರಯ್ಯ ಹಾಗೂ ಯೋಗ ಬಂಧುಗಳು ಉಪಸ್ಥಿತರಿದ್ದು ಲಕ್ಷ್ಮೀನಾರಾಯಣ್ ಕಾರ್ಯಕ್ರಮವನ್ನು ವಂದಿಸಿದರು.