National Legal Services Authority ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ನೀಡುವ ಉದ್ದೇಶಕ್ಕಾಗಿ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಪರಿತ್ಯಕ್ತ ಮಕ್ಕಳು ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೊಂದಣಿಯಾಗದ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು.
ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರ್ಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರಾಕಿಂಗ್ ಗಾಗಿ ‘ಸಾಥಿ’ ಅಭಿಯಾನದ ಅಂಗವಾಗಿ ಸಮಿತಿ ಸದಸ್ಯರುಗಳಿಗೆ ಸೋಮವಾರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿರುವನ್ವಯ ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ’ (ಸರ್ವೇ ಆಫ್ ಆಧಾರ್ ಆಂಡ್ ಆಕ್ಸಸ್ ಟು ಟ್ರಾಕಿಂಗ್ & ಹೊಲಿಸ್ಟಿಕ್ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಪರಿತ್ಯಕ್ತ ಮಕ್ಕಳಿಗೆ ಕಾನೂನು ಗುರುತು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಪರಿತ್ಯಕ್ತ, ವಲಸೆ, ಹಾಗೂ ಇನ್ನಿತರೆ ಕಾರಣಗಳಿಂದ ಆಧಾರ್ ನೋಂದಣಿಯಾಗದ ಮಕ್ಕಳನ್ನು ಗುರುತಿಸಿ ನೋಂದಣಿ ಮಾಡಿಸಲಾಗುವುದು.
National Legal Services Authority ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಜಿಲ್ಲಾ ಮಟ್ಟದ ಸಾಥಿ ಸಮಿತಿಯನ್ನು ಸಹ ರಚಿಸಲಾಗಿದ್ದು, ಅವರ ಪಾತ್ರಗಳನ್ನು ಈಗಾಗಲೇ ತಿಳಿಸಲಾಗಿದೆ.
ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮೂಲಕ ಇಂತಹ ಮಕ್ಕಳನ್ನು ಗುರುತಿಸಲು ಸರ್ವೇ ನಡೆಸಲಾಗುವುದು. ಇದಕ್ಕೆ ಸಂಬAಧಿಸಿದ ಪಾಲುದಾರ ಇಲಾಖೆಗಳು, ಎನ್‌ಜಿಓ ಗಳು ಸಹಕರಿಸಬೇಕು ಎಂದರು.
ಹೀಗೆ ಗುರುತಿಸಲ್ಪಟ್ಟ ಮಕ್ಕಳಿಗೆ ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಲಭ್ಯವಿರುವ ಆಧಾರ್ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮಾಡಿಸಬೇಕು. ಆಧಾರ್ ಜೊತೆಗೆ ಜನನ ದೃಢೀಕರಣ ಪತ್ರವೂ ಇಲ್ಲದಿದ್ದರೆ ಕಾನೂನು ಸೇವೆಗಳ ಪ್ರಾಧಿಕಾರದ ಗಮನಕ್ಕೆ ತಂದಲ್ಲಿ ಉಚಿತವಾಗಿ ಮಾಡಿಸಿಕೊಡಲಾಗುವುದು ಎಂದರು.
ಬೀದಿಗಳಲ್ಲಿ, ಆಶ್ರಯ ಕೇಂದ್ರಗಳಲ್ಲಿ, ಅನಾಥಾಶ್ರಮ, ಶೆಲ್ಟರ್ ಹೋಂ ಗಳು, ಮಕ್ಕಳ ರಕ್ಷಣಾ ಸಂಸ್ಥೆಗಳಲ್ಲಿನ ಮಕ್ಕಳನ್ನು ಆಶಾ ಮತ್ತು ಅಂಗನವಾಡಿ ಮತ್ತು ಪಾಲುದಾರ ಇಲಾಖೆಗಳು ಹಾಗೂ ಎನ್‌ಜಿಓ ಗಳ ಸಹಾಯದಿಂದ ಸರ್ವೇ ನಡೆಸಿ, ಇಂತಹ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸಬೇಕಾಗಿದ್ದು ಸಂಬಂಧಿಸಿದ ಎಲ್ಲರೂ ಶ್ರಮಿಸಬೇಕು. ಹಾಗೂ ಮಕ್ಕಳ ಶೆಲ್ಟರ್ ಹೋಂ ನಡೆಸುತ್ತಿರುವ ಎನ್‌ಜಿಓ ಗಳು ಕೂಡ ಇಂತಹ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸಲು ಹಾಗೂ ಆ ಮೂಲಕ ಮಕ್ಕಳಿಗೆ ಶಿಕ್ಷಣ,ಆರೋಗ್ಯ ಮತ್ತು ಇತರೆ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳು ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಜೂನ್ 26 ರೊಳಗೆ ಆಧಾರ್ ಇಲ್ಲದ ಮಕ್ಕಳನ್ನು ಗುರುತಿಸಿ, ಜೂನ್ 27 ರಿಂದ ಆಗಸ್ಟ್ 05 ರವರೆಗೆ ಆಧಾರ್ ನೋಂದಣಿ ಮಾಡಿಸಬೇಕು. ಆ.09 ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತಾದ ವರದಿ ಸಲ್ಲಿಸಬೇಕು. ಹಾಗೂ ಆಗಸ್ಟ್ 15 ರಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಹಾಗೂ ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿAದ ಹೊರಗುಳಿಯದಂತೆ ಅವರನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ಈ ಸಾಥಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಡಿವೈಎಸ್‌ಪಿ ಬಾಬು ಅಂಜನಪ್ಪ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಪ್ರದೀಪ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಸಿಡಬ್ಲುö್ಯಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಆಧಾರ್ ಸಂಯೋಜಕರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ಯಾನಲ್ ವಕೀಲರು ಸೇರಿದಂತೆ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.
National Legal Services Authority ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಪರಿತ್ಯಕ್ತ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿಗೆ ‘ಸಾಥಿ’ ಅಭಿಯಾನ : ನ್ಯಾ.ಸಂತೋಷ್ ಎಂ ಎಸ್
Date: