Shivakumara Swamiji Employees Association ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘ (ನೋಂ) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ. 75% ಕ್ಕಿಂತ ಹೆಚ್ಚಿನ ಅಂಕ ಪಡೆದ ಶಿವಮೊಗ್ಗ ನಗರದ ವೀರಶೈವ ಲಿಂಗಾಯಿತ ನೌಕರರ ಹಾಗೂ ವೀರಶೈವ ಲಿಂಗಾಯಿತ ಸಮಾಜ ಬಾಂಧವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು 2025ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ಶಿವಮೊಗ್ಗ ನಗರದಲ್ಲಿ ವಾಸವಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಪುರಸ್ಕರವನ್ನು ನೀಡಿ ಗೌರವಿಸಲಾಗುವುದು.
ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ. ದೃಢೀಕೃತ ಅಂಕಪಟ್ಟಿ. ವಿದ್ಯಾರ್ಥಿ/ನಿಯ ತಂದೆ/ತಾಯಿಯ ವಾಸಸ್ಥಳದ ಪುರಾವೆ, ಜಾತಿ ಪ್ರಮಾಣ ಪತ್ರ/ಶಾಲಾ ದಾಖಲಾತಿ/ಶಾಲಾ ವರ್ಗವಣೆ ಪತ್ರ(ಖಿಅ) ನೀಡಬೇಕು. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ ಇ-ಮೇಲ್‌ಗೆ ಸ್ವೀಕೃತಿ ರವಾನೆಯಾಗಲಿದೆ.
https://tinyurl.com/ppsmg2025 ಈ ಲಿಂಕ್ ಮುಖಾಂತರ ಅರ್ಜಿಯನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಲು 25-06-2025 ಕೊನೆಯ ದಿನವಾಗಿರುತ್ತದೆ.
Shivakumara Swamiji Employees Association ಶೇಕಡವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ 10.30 ರಿಂದ ಸಂಜೆ 6.00 ವರೆಗೆ 9916278470, 9448231968 ನ್ನು ಸಂಪರ್ಕಿಸಬಹುದೆAದು ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ.
Shivakumara Swamiji Employees Association ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Date:
