Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಕ್ರೀಡಾಶಾಲೆ/ವಸತಿ ನಿಲಯಗಳಿಗೆ 2025-26ನೇ ಸಾಲಿಗೆ 8ನೇ ತರಗತಿಗೆ ಮತ್ತು ಪ್ರಥಮ ಪಿ.ಯು.ಸಿ. ತರಗತಿಗಳಿಗೆ ಪ್ರವೇಶ ನೀಡಲು ಅವಕಾಶ ವಂಚಿತ ಮತ್ತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ಕ್ರೀಡಾಪಟುಗಳಿಗಾಗಿ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ತೀರ್ಮಾನಿಸಿದ್ದು, ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಜೂ.06 ರಂದು ಬೆಳಗ್ಗೆ 9.30 ರಿಂದ ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್, ಕಬಡ್ಡಿ, ವಾಲಿಬಾಲ್ ಮತ್ತು ಬೆಂಗಳೂರು ನಗರ ಜಲ್ಲೆಯ ಅಕ್ಕಿತಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ. ವಿಜಯಪುರ ಜಿಲ್ಲೆ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕ್ಲಿಂಗ್. ಬೆಳಗಾವಿ ಜಿಲ್ಲೆಯ ಯ.ಸ.& ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜುಡೋ ಮತ್ತು ಕುಸ್ತಿ. ಬೆಂಗಳೂರು ಉತ್ತರ ದ ಸರ್ಕಾರಿ ಕ್ರೀಡಾ ಪ್ರೌಢಶಾಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಖೋ-ಖೋ ಕ್ರೀಡೆಗಳನ್ನು ನಡೆಸಲಾಗುತ್ತಿದ್ದು, ಅವಕಾಶ ವಂಚಿತ ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Department of Youth Empowerment and Sports ಕ್ರೀಡಾ ವಸತಿ ಶಾಲೆ/ನಿಲಯಗಳ ಪ್ರವೇಶಕ್ಕೆ ವಿಶೇಷ ಟ್ರಯಲ್ಸ್ ಪಡೆಯಲು ಅವಕಾಶ
Date: