Karnataka State Road Transport Corporation ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂನ್-02 ರಿಂದ ಆರಂಭಿಸಿದ್ದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ.
ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸ ಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಆ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‌ಕಾರ್ಡ್ / ಡೆಬಿಟ್ ಕಾರ್ಡ್/UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ. ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ಹಾಗೂ ಪಾಸಿನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://ksrtc.karnataka.gov.in / student pass ನಲ್ಲಿ ಒದಗಿಸಲಾಗಿದೆ.
Karnataka State Road Transport Corporation ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ವಿಧ್ಯಾರ್ಥಿಗಳು ಆನ್‌ಲೈನ್ ಅಥವಾ ಗ್ರಾಮ ಒನ್/ಕರ್ನಾಟಕ ಒನ್‌ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್ ಕಾರ್ಡ್ ) ಪಡೆಯಲು ಶಿವಮೊಗ್ಗ ,-ಕರ್ನಾಟಕ ಒನ್, 01 ನೇ ಮಹಡಿ, ಖಾಸಗಿ ಬಸ್ ನಿಲ್ದಾಣ, ಶಿವಮೊಗ್ಗ-577201. ಶಿಕಾರಿಪುರ – ಕರ್ನಾಟಕ ಒನ್, ತಾಲೂಕು ಕಚೇರಿ ಹಿಂಭಾಗ, ಶಿಕಾರಿಪುರ-577427. ಭದ್ರಾವತಿ – ಕರ್ನಾಟಕ ಒನ್, ಅಜೀಜ್ ಡಿಜಿಟಲ್ ಸರ್ವಿಸ್, ಓಲ್ಡ್ ಟೌನ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಭದ್ರಾವತಿ. ಸಾಗರ -ಕರ್ನಾಟಕ ಒನ್, ಜ್ಯೋತಿ ಕಂಪ್ಯೂಟರ‍್ಸ್, ಕೋರ್ಟ್ ರಸ್ತೆ, ತಾಲ್ಲೂಕು ಕಛೇರಿ ಎದುರು, ಸಾಗರ-577401. ಹೊನ್ನಾಳಿ -ಕರ್ನಾಟಕ ಒನ್, ಟಿ.ಎಸ್ ಕಾಂಪ್ಲೆಕ್ಸ್, ಟಿ.ಎಂ ರಸ್ತೆ, ತಾಲ್ಲೂಕು ಕಛೇರಿ ಎದುರು, ಹೊನ್ನಾಳಿ-577217. ಸೊರಬ -ಕರ್ನಾಟಕ ಒನ್, ಮೈಕಾ ಕಂಪ್ಯೂಟರ‍್ಸ್, ನೂರ್ ಕಾಂಪ್ಲೆಕ್ಸ್, ಎಸ್.ಎಸ್ ರಸ್ತೆ, ಸೊರಬ-577429. ಈ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಲು ಕೋರಿದೆ.
Karnataka State Road Transport Corporation ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ವಿತರಣೆ ಆರಂಭ
Date: