Saturday, December 6, 2025
Saturday, December 6, 2025

University of Mysore ಪ್ರಥಮ ಬಿ.ವಿ.ಎ. ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Date:

University of Mysore ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್, ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
University of Mysore ಆಸಕ್ತರು ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ಗಳ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ 0821-2438931 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...