Thursday, March 26, 2026
Thursday, March 26, 2026

District Fisheries Department ಮತ್ಸ್ಯಸಂಪದ ಯೋಜನೆ ಸಹಾಯಧನ ಪಡೆಯಲು ಇಲಾಖೆ ಮಾಹಿತಿ

Date:

District Fisheries Department ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂ. 30ರವರೆಗೆ ವಿಸ್ತರಿಸಲಾಗಿದೆ.
ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್‌ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
District Fisheries Department ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರ್ಣ ದಾಖಲೆಗಳೊಂದಿಗೆ ಜೂ. 30 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...