Shimoga News ಶಿವಮೊಗ್ಗ ಜಿಲ್ಲೆಯಲ್ಲಿನ ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ತಾಲ್ಲೂಕಿನ ತಮ್ಮಡಿಹಳ್ಳಿ, ಭದ್ರಾವತಿ ತಾಲ್ಲೂಕಿನ ಸಿದ್ಲಿಪುರ, ಬಾರಂದೂರು, ತೀರ್ಥಹಳ್ಳಿ ತಾಲ್ಲೂಕಿನ ಹರಗೋಲಿಗೆ, ನಾಲೂರು(ಕೊಳಗಿ), ಶೆಡ್ಗಾರ್, ಹೆದ್ದೂರು, ಸಾಗರ ತಾಲ್ಲೂಕಿನ ಎಸ್.ಎಸ್ ಬೋಗ್, ಹೀರೆನೆಲ್ಲೂರು, ಶಿಕಾರಿಪುರ ತಾಲ್ಲೂಕಿನ ಚುರ್ಚಿಗುಂಡಿ, ಮರವಳ್ಳಿ, ಹೊಸನಗರ ತಾಲ್ಲೂಕಿನ ತಿರ್ನಿವೆ, ಮುಂಬಾರು, ಯಡೂರು, ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮಗಳಲ್ಲಿ Shimoga News ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನಾಂಕವಾಗಿದೆ.
ಆಸಕ್ತಿಯುಳ್ಳವರು https://www.karnatakaone.gov.in/Public/GramOneFranchiseeTrems ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.
Shimoga News ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗ್ರಾಮ ನಂ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ
Date: