Karnataka Veerashaiva Lingayat Development Corporation ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಶೈಕ್ಷಣಿಕ ಸಾಲ ಯೋಜನೆ, ಜೀವಜಲ ಯೋಜನೆ, ಕಾಯಕಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಸ್ವ ಸಹಾಯ ಸಂಘಗಳ ಉತ್ತೇಜನ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಸವಿತಾ ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಈ ಮೇಲಿನ ಯೋಜನೆಯ ಫಲಾನುಭವಿಗಳಾಗಲು ಅರ್ಜಿದಾರರು ತಮ್ಮ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ಅಥವಾ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. 2023-24 ಹಾಗೂ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಅದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
Karnataka Veerashaiva Lingayat Development Corporation ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರುವು ಗಾಂಧಿನಗರ, ಶಿವಮೊಗ್ಗ ಇಲ್ಲಿ ಪಡೆಯಬಹುದಾಗಿದೆ. ದೂ.ಸಂ. 08182-229634 ಗೆ ಸಂಪರ್ಕಿಸಬಹುದಾಗಿರುತ್ತದೆ.
Karnataka Veerashaiva Lingayat Development Corporation ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
Date: