Karnataka Vokkaliga Development Corporation ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ,(ಬ್ಯಾಂಕುಗಳ ಸಹಯೋಗದೊಂದಿಗೆ) ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ರಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಕ್ರಮ ಸಂಖ್ಯೆ 1(ಎ) ಯಿಂದ (ಟಿ) ವರೆಗೆ ನಮೂದಾಗಿರುವ ಸಮುದಾಯಕ್ಕೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯಿತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪಜಾತಿಗಳನ್ನು ಹೊರತುಪಡಿಸಿ)ಸೇರಿದ ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Karnataka Vokkaliga Development Corporation ನಿಗಮವು ಅನುಷ್ಠಾನಗೊಳಿಸಿರುವ ಮೇಲ್ಕಂಡ ಯೋಜನೆಗಳನ್ನು ಶಾಸಕರು ಅಥವಾ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಿದ ಆಯ್ಕೆ ಸಮಿತಿಯ ಮೂಲಕ ಆಯ್ಕೆಯನ್ನು ಮಾಡಲಾಗುವುದು. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.
ಈ ಸೌಲಭ್ಯಗಳನ್ನು ಪಡೆಯಲು ಸೇವಾಸಿಂಧು http:/sevasindhu.karnataka.gov.in ಪೋರ್ಟಲ್‌ನ ಮುಖಾಂತರ ಗ್ರಾಮ ಒನ್, ಶಿವಮೊಗ್ಗ ಒನ್, ಕರ್ನಾಟಕ ಒನ್, ಮೂಲಕ ಅನ್ ಲೈನ್ ನಲ್ಲಿ ಮತ್ತು ಕ್ರಮಸಂಖ್ಯೆ 06 ರಲ್ಲಿ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಂಶ https://www.kaushalkar.com ನಲ್ಲಿ ಅರ್ಜಿಯನ್ನು ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಜಾಲತಾಣ https://kvcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಭಾಗ್ಯ ನಿಲಯ, 1ನೇ ತಿರಿವು, ಗಾಂಧಿನಗರ, ಶಿವಮೊಗ್ಗ ಇಲ್ಲಿ ಪೆಡೆಯಬಹುದಾಗಿದೆ. ದೂ. ಸಂ. 08182-229634 ಸಂಪರ್ಕಿಸಿ ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Karnataka Vokkaliga Development Corporation ಕರ್ನಾಟಕ ಒಕ್ಕಲಿಗರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
Date: