Prabhu Mestri ಪುರಸಭೆ ವ್ಯಾಪ್ತಿಗೆ ಒಳಪಡುವ ಹೊಸಪೇಟೆ ಬಡಾವಣೆಯಲ್ಲಿ ಮಳಿಯಿಂದಾಗಿ ರಸ್ತೆಯಲ್ಲಿ ನೀರು ನಿಂತು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾದ ಪ್ರದೇಶಗಳಿಗೆ ಪುರಸಭೆ ಅಧ್ಯಕ್ಷ ಪ್ರಭು ಮೇಸ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೊಸಪೇಟೆ ಬಡಾವಣೆಯ ನಾರಾಯಣಗುರು ಸರ್ಕಲ್, ಹೊಸಬಾಳೆ ರಸ್ತೆಯ ಶ್ರೀ ವಿವೇಕಾನಂದ ವೃತ್ತ ಸೇರಿದಂತೆ ಸಿದ್ದಾಪುರ ರಸ್ತೆಯಲ್ಲಿ ಅವಲೋಕಿಸಿದರು.
ಮಳೆ ಬಂದ ಸಂದರ್ಭದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲಿ ಹೊಳೆಯಂತೆ ಹರಿಯುತ್ತದೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು.
ಇಲ್ಲವಾದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಪುರಸಭೆ ಗಮನಕ್ಕೆ ತಂದರೂ ಯಾರೂ ಸಹ ಗಮನ ನೀಡಿಲ್ಲ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜ ಗೌಡ ಚಿಕ್ಕಾವಲಿ ಅವರು ಪುರಸಭೆ ಅಧ್ಯಕ್ಷರ ಗಮನಕ್ಕೆ ತಂದರು.
ಪ್ರತಿಕ್ರಿಯಿಸಿದ ಪುರಸಭೆ ಅಧ್ಯಕ್ಷ ಪ್ರಭು ಮೇಸ್ತ್ರಿ ಹೊಸಪೇಟೆ ಬಡಾವಣೆಯು ಪುರಸಭೆ ವ್ಯಾಪ್ತಿಗೆ ಒಳಪಡುತ್ತದೆ. ಈಗಾಗಲೇ ಪುರಸಭೆಯಿಂದ ಕಸ ಸಂಗ್ರಹಣೆ ಮಾಡಲಾಗುತ್ತಿದೆ.
Prabhu Mestri ಸಾರ್ವಜನಿಕರಿಗೆ ತೊಂದರೆಯಾಗದಂತೆ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗುವುದು. ಮಳೆಗಾಲ ಆರಂಭವಾಗಿದೆ. ಕಳೆದ ಎರಡು ದಿನಗಳಿಂದ ಮಳೆ ಬಿಡುವು ನೀಡಿದ್ದು, ಕೆಲವಡೆ ಚರಂಡಿಗಳನ್ನು ಮುಚ್ಚಲಾಗಿದೆ. ಕೂಡಲೇ ಅವುಗಳನ್ನು ತೆರವು ಮಾಡಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಸ್. ರಣಜಿತ್ ಕುಮಾರ್, ಆರೋಗ್ಯ ನಿರೀಕ್ಷಕ ಎ.ಎನ್. ರವಿಕುಮಾರ್ ನಾಯ್ಕ್, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಉಪಾಧ್ಯಕ್ಷ ದತ್ತಾ ಸೊರಬ, ಹೊಸಪೇಟೆ ಬಡಾವಣೆ ನಿವಾಸಿ ನವೀನ್ ಕುಮಾರ್ ಸೇರಿದಂತೆ ಪುರಸಭೆ ಸಿಬ್ಬಂದಿ ಮುನಿಸ್ವಾಮಿ ಸೇರಿದಂತೆ ಇತರರಿದ್ದರು.
