Shivamogga Chamber of Commerce ಹೋಟೆಲ್ ಉದ್ಯಮದ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಉದ್ಯಮಿ ಎನ್.ಗೋಪಿನಾಥ್ ಅವರ ಸೇವೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಕರ್ನಾಟಕ ಹೋಟೆಲ್‌ಗಳ ಸಂಘದಿಂದ ಆತಿಥ್ಯ ರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಎನ್.ಗೋಪಿನಾಥ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದಿಸಿ ಮಾತನಾಡಿದರು.
ಗೋಪಿನಾಥ್ ಅವರು ಮಥುರಾ ಗೋಪಿ ಎಂದೇ ಶಿವಮೊಗ್ಗದಲ್ಲಿ ಪ್ರಸಿದ್ಧರಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಸಂಘ ಸಂಸ್ಥೆಗಳಲ್ಲಿ ಮಹತ್ತರ ಜವಾಬ್ದಾರಿ ನಿರ್ವಹಿಸುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಪ್ರವಾಸೋದ್ಯಮ ಕ್ಷೇತ್ರ, ಹೋಟೆಲ್ ಉದ್ಯಮ ಸೇರಿದಂತೆ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ನಿರಂತರವಾಗಿ ಕಾರ್ಯಾಗಾರ, ತರಬೇತಿ, ಸಂವಾದ, ವಿಚಾರಗೋಷ್ಠಿಗಳನ್ನು ಆಯೋಜಿಸಿಕೊಂಡು ಹೊಸ ಚಿಂತನೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ರೋಟರಿ ಸಂಸ್ಥೆ, ಸುಗಮ ಸಂಗೀತ ಪರಿಷತ್, ಪ್ರವಾಸೋದ್ಯಮ ವೇದಿಕೆ, ಹೋಟೆಲ್ ಮಾಲೀಕರ ಸಂಘ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಯುವಜನರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದ್ದಾರೆ. ಮಥುರಾ ಪ್ಯಾರಾಡೈಸ್ ಮೂಲಕ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ ಎಂದು ತಿಳಿಸಿದರು.
Shivamogga Chamber of Commerce ಇದೇ ಸಂದರ್ಭದಲ್ಲಿ ಎನ್.ಗೋಪಿನಾಥ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸನ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಸುಕುಮಾರ್, ಖಜಾಂಚಿ ಮನೋಹರ್, ಡಾ. ಲಕ್ಷ್ಮೀದೇವಿ ಗೋಪಿನಾಥ್ ಹಾಗೂ ಸಂಘದ ನಿರ್ದೇಶಕರು ಹಾಜರಿದ್ದರು.
