Ahmedabad Plane Crash ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದೆ.
242ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು ಮಧ್ಯಾಹ್ನ 1:50ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೆ ಈಡಾಗಿದೆ.
ವಿಮಾನವು ಮೇಘನಿ ನಗರ ಬಳಿ ಪತನ ಆಗಿದ್ದು, ಆ ಪ್ರದೇಶದಲ್ಲಿ ಭೀತಿಯನ್ನುಂಟು ಮಾಡಿದೆ. ಇನ್ನು ವಿಮಾನ ಪತನವಾದ ಪ್ರದೇಶದ ದೃಶ್ಯಗಳು ಎಲ್ಲೆಡೆ ವೈರಲ್ ಆಗುತ್ತಿವೆ.
