Information and Public Relations Department ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದು, ಇದರಿಂದ ಜನ ಸಾಮಾನ್ಯರ ಜೀವನದ ಗುಣಮಟ್ಟ ಉತ್ತಮ ರೀತಿಯಲ್ಲಿ ಸುಧಾರಣೆಯಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ 2 ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಕುರಿತು ಶುಕ್ರವಾರದಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಯಾವುದೇ ದೇಶ ಪ್ರಗತಿಯಾಗಬೇಕಾದರೆ ಎಲ್ಲರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಈ ನಿಟ್ಟಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುವ ‘ಶಕ್ತಿ ಯೋಜನೆ ಮತ್ತು ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ. 2000 ಹಣ ನೀಡುವ ಗೃಹಲಕ್ಷ್ಮೀ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ನೇರವಾಗಿ ಡಿಬಿಟಿ ಮೂಲಕ ಮನೆ ಯಜಮಾನಿಗೆ ಹಣ ತಲುಪುತ್ತಿದ್ದು ಈ ಯೋಜನೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ. ಹಾಗೂ ನಮ್ಮ ದೇಶದ ಇತರೆ ರಾಜ್ಯಗಳೂ ಸಹ ಈ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯದ ಗ್ಯಾರಂಟಿ ಯೋಜನೆಗಳು ಹೆಗ್ಗಳಿಕೆಗೆ ಪಾತ್ರವಾಗಿವೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಆರ್ಥಿಕ ಸಬಲೀಕರಣ ಮತ್ತು ಸಾಮಾಜಿಕ ಬದಲಾವಣೆಗೆ ಕಾರಣಕರ್ತರಾದ ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳಿಗೆ ಧನ್ಯವಾದಗಳು. ಈ ಯೋಜನೆಗಳು ಜನ ಸಾಮಾನ್ಯರ ಬದುಕಿನ ಗುಣಮಟ್ಟ ಹೆಚ್ಚಿಸಿದೆ. ಗ್ರಾಮೀಣ ಭಾಗದಲ್ಲಿ ಉತ್ತಮ ಅಭಿವೃದ್ದಿ ಸಾಧ್ಯವಾಗಿದ್ದು, ಜೀವನ ಮಟ್ಟ ಸುಧಾರಿಸಿದೆ. ಉಚಿತ ಪ್ರಯಾಣದಿಂದ ಸರ್ಕಾರಕ್ಕೆ ಯಾವುದೇ ರೀತಿ ನಷ್ಟ ಇಲ್ಲ, ಬದಲಾಗಿ ಸಾರಿಗೆ ಇಲಾಖೆಗೆ ಲಾಭವೇ ಆಗುತ್ತಿದೆ. ಸರ್ಕಾರದ ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ. ಯುವನಿಧಿ ಯೋಜನೆಗೆ ಹೆಚ್ಚೆಚ್ಚು ಯುವಜನತೆ ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆಯಬೇಕು. ಜನರು ತಮಗಾಗಿಯೇ ಇರುವ ವಿವಿಧ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕು. ವಾರ್ತಾ ಇಲಾಖೆ ವತಿಯಿಂದ ಇಲ್ಲಿ ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಕುರಿತು ಏರ್ಪಡಿಸಿರುವ ವಸ್ತುಪ್ರದರ್ಶನವನ್ನು ಎಲ್ಲರೂ ವೀಕ್ಷಿಸಬೇಕು ಎಂದರು.
Information and Public Relations Department ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಚಂದ್ರಭೂಪಾಲ್ ಮಾತನಾಡಿ, ರಾಜ್ಯದ ಬಡ, ಹಿಂದುಳಿದ ಮತ್ತು ಸಾಮಾನ್ಯ ಜನರ ಜೀವನ ಸುಗಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅತಿ ಮಹಾತ್ವಾಕಾಂಕ್ಷೆಯುಳ್ಳ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಯಶಸ್ಸು ಕಾಣುತ್ತಿದೆ.
ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು ‘ಶಕ್ತಿ’ ಯೋಜನೆ, ರಾಜ್ಯದ ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ. 2000 ಹಣ ನೀಡುವ ಗೃಹಲಕ್ಷ್ಮಿ, ಹಸಿವುಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ ಪೂರ್ಣಗೊಳಿಸಿದ ಯುವಜನತೆಗೆ ಉದ್ಯೋಗ ಪಡೆಯಲು ಅನುವಾಗಲು ಪ್ರತಿ ತಿಂಗಳು ಪದವೀಧರರಿಗೆ ರೂ. 3000, ಹಾಗೂ ಡಿಪ್ಲೋಮಾದಾರರಿಗೆ ರೂ. 1500 ನೀಡುವ ಯುವನಿಧಿ, ಪ್ರತಿಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳ ಹಾಗೂ ರಾಜ್ಯ ಸರ್ಕಾರದ ಇತರೆ ಯೋಜನೆಗಳ ಕುರಿತಾದ ಈ ವಸ್ತುಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ ಎಂದರು.
Information and Public Relations Department ಕ್ರಾಂತಿಕಾರಿ ಬದಲಾವಣೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳು : ಬಲ್ಕೀಶ್ ಬಾನು
Date: