Shivamogga Horticulture Department ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಪ್ರತಿ ಹೆಕ್ಟರ್‌ಗೆ ರೂ. 1500/- ರಂತೆ ಗರಿಷ್ಟ 2 ಹೆಕ್ಟೆರ್ ಪ್ರದೇಶಕ್ಕೆ ಸಹಾಯಧನ ಪಡೆಯಲು ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣೆ, ಆಧಾರ್ ಮತ್ತು ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರದ ಪ್ರತಿಗಳನ್ನು ಲಗತ್ತಿಸಿ ಜೂ. 30 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಹಾ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ಜಿಲ್ಲಾ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವುದು.
Shivamogga Horticulture Department ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ
Date:
