Shivamogga Scheduled Caste Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿಂಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
Shivamogga Scheduled Caste Welfare Department ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು.
Shivamogga Scheduled Caste Welfare Department ಪರಿಶಿಷ್ಟ ವರ್ಗಗಳ ಇಂಜಿನಿಯರಿಂಗ್ ಪದವಿಧರರಿಂದ ತರಬೇತಿಗೆ ಅರ್ಜಿ ಆಹ್ವಾನ
Date: