Dist Horticulture office,Shimoga ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾರಿಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯ ರೈತರಿಂದ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ.
ರೈತರು ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಸಮೀಪದ ಬ್ಯಾಂಕ್/ಸಾರ್ವಜನಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಜು 31 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವAತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dist Horticulture office,Shimoga ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಅಥವಾ ಆಯಾ ರೈತ ಸಂಪರ್ಕ ಕೇಂದ್ರಗಳಾದ ಶಿವಮೊಗ್ಗ: 08182-279415/9900046087, ಭದ್ರಾವತಿ:08282-295029/ 9108252536, ಶಿಕಾರಿಪುರ: 08187-223544/8310662972, ಸೊರಬ: 08184-295112/ 990046117, ಸಾಗರ: 08183-295124/9449177200 ತೀರ್ಥಹಳ್ಳಿ: 08181-228151/ 9108280642, ಹೊಸನಗರ:08185-295364/9591695327 ಅಧಿಕಾರಿಗಳನ್ನು ಸಂಪರ್ಕಿಸುವುದು.
Dist Horticulture office,Shimoga ಹವಾಮಾನಾಧಾರಿತ ಬೆಳೆ ವಿಮೆ.ನೋಂದಣಿ ಮಾಡಿಸಿಕೊಳ್ಳಲು ಅರ್ಜಿ ಆಹ್ವಾನ
Date:
