Monday, December 15, 2025
Monday, December 15, 2025

Nadaprabhu Kempegowda ಕೆಂಪೇಗೌಡರಿಂದಾಗಿ ಬೆಂಗಳೂರು ಜಗತ್ತಿನ ಗಮನ ಸೆಳೆದಿದೆ – ಬಸವರಾಜ ಹೊರಟ್ಟಿ

Date:

Nadaprabhu Kempegowda ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಅವರ ದೂರದೃಷ್ಟಿಯುಳ್ಳ ಕ್ರಾಂತಿಕಾರಕ ಆಡಳಿತ ವೈಖರಿಯಿಂದ ಬೆಂಗಳೂರು ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಂದೇಶದಲ್ಲಿ ಬಣ್ಣಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಉತ್ಸವದ ಅಂಗವಾಗಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಹಂಪಿಯ ವೈಭವ ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿರುವ ಬೆಂಗಳೂರು ನಗರ ಇಂದು ಬಹುವಾಗಿ ಬೆಳೆದು ಜಾಗತಿಕ ನಕ್ಷೆಯಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನ ಪಡೆದುಕೊಂಡಿದೆ.

ಕೆಂಪೇಗೌಡರು ನಿರ್ಮಿಸಿರುವ ಕೆರೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ. ಬೆಂದಕಾಳೂರು ಎಂಬ ನಾಮದಿಂದ ಕರೆಯುತ್ತಿದ್ದ ನಗರ ಇಂದು ಬೆಂಗಳೂರು ನಗರವಾಗಿ ರೂಪುಗೊಂಡಿದ್ದು, ಕೆಂಪೇಗೌಡರ ದೂರದೃಷ್ಟಿಯ ಫಲ ಎಂದು ಶ್ರೀ ಬಸವರಾಜ ಹೊರಟ್ಟಿ ಅಭಿಮಾನದಿಂದ ತಿಳಿಸಿದರು.

ಕೆಂಪೇಗೌಡರ ಬದುಕು, ಹೋರಾಟ ಅವರ ದೂರದೃಷ್ಟಿಯುಳ್ಳ ಪರಿಣಾಮಕಾರಿ ಆಡಳಿತ ಇಂದಿಗೂ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೆಂಪೇಗೌಡರ ಅನುಯಾಯಿಯಾಗಿದ್ದು, ಅವರಿಂದ ಪ್ರೇರಣೆ ಪಡೆದು ಕೆಂಪೇಗೌಡರ ಕನಸಿನ ಬೆಂಗಳೂರು ನಗರದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದು ಶ್ಲಾಘನೀಯ, ಕೆಂಪೇಗೌಡರ ಹೆಸರನ್ನು ಸ್ವತಃ ತಮ್ಮ ಮಗನಿಗೆ ನಾಮಕರಣ ಮಾಡಿರುವ ಡಿ.ಕೆ. ಶಿವಕುಮಾರ್, ಕೆಂಪೇಗೌಡರ ಬಗೆಗೆ ತಮಗಿರುವ ಭಕ್ತಿ, ಶ್ರದ್ದೆ ಹಾಗೂ ಬದ್ಧತೆಯನ್ನು ಸಾಕ್ಷೀಕರಿಸಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಮಾನ ವ್ಯಕ್ತಪಡಿಸಿದರು.

ಸಾವಿರ ಕೆರೆಗಳ ನಾಡು ಎಂದು ಖ್ಯಾತಿ ಪಡೆದಿರುವ ಬೆಂಗಳೂರನ್ನು ವ್ಯವಸ್ಥಿತ ನಗರವನ್ನಾಗಿ ಬೆಳೆಸುವ ಕನಸು ಹೊತ್ತಿದ್ದ ಕೆಂಪೇಗೌಡರ ದೂರದರ್ಶಿತ್ವ ಇಂದು ನಮಗೆಲ್ಲರಿಗೂ ಮೇಲ್ಪಂಕ್ತಿಯಾಗಿದ್ದು ಕೆಂಪೇಗೌಡರ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ, ಬೆಂಗಳೂರಿನ ಸೌಂದರ್ಯವನ್ನು ಉಳಿಸಿ ಅಚ್ಚುಕಟ್ಟಾಗಿ ಬೆಳೆಸುವ ಮೂಲಕ ಕೆಂಪೇಗೌಡರ ಕನಸನ್ನು ನನಸನ್ನಾಗಿಸುವುದು ನಾವೆಲ್ಲರೂ ನಾಡಪ್ರಭುಗಳಿಗೆ ಸಲ್ಲಿಸುವ ನೈಜ ಗೌರವವಾಗಿದೆ.

Nadaprabhu Kempegowda ಈ ನಿಟ್ಟಿನಲ್ಲಿ ಇಂದಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಮುಂದಡಿ ಇಟ್ಟಿದ್ದಾರೆ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಸವರಾಜ ಹೊರಟ್ಟಿ ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...