Nursing and GNM Nursing Courses 2025-26 ನೇ ಸಾಲಿಗೆ ಬಿಎಸ್.ಸಿ ನರ್ಸಿಂಗ್ ಅಂಡ್ ಜಿಎನ್‌ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://sevasindhuservices.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕೋರ್ಸ್ ಅವಧಿ ಪೂರ್ಣಾವಧಿಯದ್ದಾಗಿರುತ್ತದೆ, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
Nursing and GNM Nursing Courses ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್https://dom.karnataka.gov.inನ್ನು ವೀಕ್ಷಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Nursing and GNM Nursing Courses ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ
Date:
