Rotary Shivamogga ರೋಟರಿ ಜಿಲ್ಲಾ ಗವರ್ನರ್ ಆಗಿ ಕೆ.ಪಾಲಾಕ್ಷಪ್ಪ ಅವರಿಗೆ ರೋಟರಿ ಶಿವಮೊಗ್ಗ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
ಹಾಸನದ ಪವನಪುತ್ರ ಕನ್ವನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಗವರ್ನರ್ ಆಗಿ ಕೆ.ಪಾಲಾಕ್ಷಪ್ಪ ಅಧಿಕಾರ ವಹಿಸಿಕೊಂಡರು. ರೋಟರಿ ಜಿಲ್ಲೆಯು ಹಾಸನ, ಚಿಕ್ಕಮಗಳೂರು, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡಿರುತ್ತದೆ. ಒಂದು ವರ್ಷದ ಅವಧಿಗೆ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ.
ರೋಟರಿ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಸಮಾಜಮುಖಿ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಬಂದಿದ್ದು, ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ. ಇಂತಹ ಪ್ರತಿಷ್ಠಿತ ಸಂಸ್ಥೆಗೆ ನೂತನ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾದ ಪಾಲಾಕ್ಷ ಅವರಿಗೆ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.
Rotary Shivamogga ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ನಿಯೋಜಿತ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್, ಮಾಜಿ ಅಧ್ಯಕ್ಷ ಎನ್.ಎಚ್.ಶ್ರೀಕಾಂತ್, ಮಂಜುನಾಥ್ ರಾವ್ ಕದಂ, ಚಂದ್ರಹಾಸ್ ಪಿ.ರಾಯ್ಕರ್, ಡಾ. ಕಡಿದಾಳ್ ಗೋಪಾಲ್, ಶಬರಿ ಕಡಿದಾಳ್, ಚಂದ್ರಶೇಖರಯ್ಯ, ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಪ್ರಮೀಳಾ, ರೋಟರಿ ಶಿವಮೊಗ್ಗ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು
