Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 2024-25ನೇ ಸಾಲಿಗೆ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಮಾತ್ರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 10ಕ್ಕೆ ವಿಸ್ತರಿಸಲಾಗಿದೆ.
ಆಸಕ್ತರು https://ssp.postmatric.karnataka.gov.in ಮೂಲಕ ಜು. 10 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ 8050770005 ನ್ನು ಇ-ಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ postmatrichelp@karnataka.gov.in, ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ https://bcwd.karnataka.gov.in ಗಳನ್ನು ಹಾಗೂ ದೂರವಾಣಿ ಸಂ.: 1902 ಗಳನ್ನು ಸಂಪರ್ಕಿಸುವುದು.
Backward Classes Welfare Department ಮೆಟ್ರಿಕ್ ನಂತರದ ಕೋರ್ಸ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Date:
