Shivamogga City Corporation ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. Shivamogga City Corporation ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯ ನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ತತ್ತಕ್ಷಣದಲ್ಲಿ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದಲ್ಲಿ ಜನಸಾಮಾನ್ಯರು ರಸ್ತೆಗೆಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
Shivamogga City Corporation ರೈಲ್ವೆ ಪ್ರಯಾಣದರ ಏರಿಕೆ ತಕ್ಷಣ ಹಿಂಪಡೆಯಿರಿ- ರೇಖಾ ರಂಗನಾಥ್ ಆಗ್ರಹ
Date:
