Monday, February 2, 2026
Monday, February 2, 2026

Almatti Dam ಜುಲೈ 8 ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ಕೃಷಿ ಭೂಮಿಗೆ ನೀರು ಬಿಡುಗಡೆ- ಸಚಿವ ಆರ್.ಬಿ.ತಿಮ್ಮಾಪುರ

Date:

Almatti Dam ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ 80.58 ಟಿಎಂಸಿ ನೀರು ಸಂಗ್ರಹವಾಗಿದ್ದು, ಜುಲೈ 8ರಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್. ಬಿ. ತಿಮ್ಮಾಪೂರ ಅವರು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸಚಿವ ಆರ್ ಬಿ ತಿಮ್ಮಾಪೂರ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2025-26 ನೇ ಸಾಲಿನ ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಾಯಿತು.

ಆಲಮಟ್ಟಿ ಮತ್ತು ನಾರಾಯಣಪುರ ಡ್ಯಾಂಗಳಲ್ಲಿ 80.58 ನೀರು ಸಂಗ್ರಹವಾಗಿದ್ದು, ಕಳೆದ ಸಾಲಿಗಿಂತ 54.77 ಟಿಎಂಸಿ ಹೆಚ್ಚುವರಿ ನೀರು ಸಂಗ್ರಹವಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶವು ಮುಂಗಾರು ಹಂಗಾಮಿನ ಮಳೆ ಆಧರಿತವಾಗಿದ್ದು, ಮಳೆಯನ್ನು ಆಧರಿಸಿ ಅವಶ್ಯಕತೆಗೆ ತಕ್ಕಂತೆ ನೀರು ಹರಿಸಲು ಸಚಿವರು ಸೂಚಿಸಿದರು.

Almatti Dam ಜುಲೈ 8 ರಿಂದ ಮುಂದಿನ 120 ದಿನಗಳಿಗೆ‌ ಮುಂಗಾರು ಹಂಗಾಮಿಗೆ ನೀರು ಪೂರೈಸಲು ತೀರ್ಮಾನಿಸಲಾಗಿದೆ. ಒಳಹರಿವು ಆಧರಿಸಿ ಕಾಲುವೆಗಳಿಗೆ ಸತತವಾಗಿ ನೀರು ಬಿಡಲು ಸಚಿವ ತಿಮ್ಮಾಪೂರ ಅವರು ಅಧಿಕಾರಿಗಳಿಗೆ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...