Dr. Manmohan Singh ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನಮ್ಮ ಕರ್ತವ್ಯ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ನಿಟ್ಟಿನಲ್ಲಿ ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ.
ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ.
ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ.
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದ್ದೇವೆ.
ಎಂದು
ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು .
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್.ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
Dr. Manmohan Singh ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು.
ಎಂದು ಮಾಹಿತಿ ನೀಡಿದರು.
