Friday, March 20, 2026
Friday, March 20, 2026

Ashakirana Public School ಕರಾಟೆ ಕಲಿತರೆ ರಕ್ಷಣೆ ಜೊತೆಗೆ ಆತ್ಮವಿಶ್ವಾಸದ ವೃದ್ಧಿ- ಸಿಯಾನ್ ಪಂಚಪ್ಪ

Date:

Ashakirana Public School ಕರಾಟೆ ಜನಪ್ರಿಯವಾದ ಸಮರ ಕಲೆಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕರಾಟೆಯನ್ನು ಕಲಿಯುವುದರಿಂದ ಆತ್ಮರಕ್ಷಣೆಯೊಂದಿಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರಾಟೆ ತರಬೇತುದಾರ ಸಿಯಾನ್ ಪಂಚಪ್ಪ ಹೇಳಿದರು.
ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಆಶಾಕಿರಣ ಪಬ್ಲಿಕ್ ಶಾಲೆಯಲ್ಲಿ ಸಾಗರ ಕರಾಟೆ ಇನ್ಸಿ÷್ಟಟ್ಯೂಟ್ ವತಿಯಿಂದ ಹಮ್ಮಿಕೊಂಡ ಕರಾಟೆ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಕೇವಲ ಪಠ್ಯದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಮನೋಭಾವದಿಂದ ಪೋಷಕರು ಹೊರ ಬರಬೇಕು. ಶಿಕ್ಷಣ ಎಷ್ಟು ಮುಖ್ಯವೋ ಅದೇ ರೀತಿಯಲ್ಲಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಲಭಿಸುತ್ತದೆ. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭೆಗಳಿದ್ದು, ಅವರಿಗೆ ತರಬೇತಿ ನೀಡಿದರೆ ಒಲಂಪಿಕ್‌ನAತಹ ಕ್ರೀಡೆಗಳಲ್ಲೂ ಭಾಗವಹಿಸುವರಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕರಾಟೆ ತರಬೇತಿಯು ಸ್ವರಕ್ಷಣೆಗೆ ಅತ್ಯಂತ ಸೂಕ್ತವಾಗಿದೆ ಎಂದರು.
Ashakirana Public School ಕಾರ್ಯಕ್ರಮ ಉದ್ಘಾಟಿಸಿದ ಆಶಾಕಿರಣ ಪಬ್ಲಿಕ್ ಶಾಲೆ ಮುಖ್ಯಸ್ಥ ಹಾಗೂ ಮಾಜಿ ಯೋಧ ಯು. ಸಂಗಪ್ಪ ಮಾತನಾಡಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಆಸಕ್ತಿ ಮೂಡಲು ಸಾಧ್ಯವಾಗುತ್ತದೆ. ಬಹುಉಪಕಾರಿಯಾದ ಕರಾಟೆ ಹಾಗೂ ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರಾಟೆ ತರಬೇತಿಯಿಂದ ಸಾಮರ್ಥ್ಯವು ಸಹ ಹೆಚ್ಚುತ್ತದೆ ಮತ್ತು ಕ್ರಿಯಾಶೀಲರಾಗಲು ಸಾಧ್ಯವಾಗುತ್ತದೆ ಎಂದರು.
ಪೋಷಕ ಪ್ರತಿನಿಧಿ ರಾಜು ಹಿರಿಯಾವಲಿ, ಸಂಸ್ಥೆಯ ಮುಖ್ಯಶಿಕ್ಷಕಿ ಯು. ಶೋಭಾ, ಸಹಶಿಕ್ಷಕರಾದ ಚಂದ್ರಶೇಖರ್, ಹೇಮಾವತಿ, ಸುಮಲತಾ, ಸುಪ್ರಜಾ, ಸಂಪ್ರತಾ, ರಾಧಿಕಾ, ಪ್ರವೀಣ್, ಅಮೃತಾ, ಕರಾಟೆ ತರಬೇತುದಾರರಾದ ಮಧುಕೇಶ್ವರ ಹಾಗೂ ಮಧು ಯು.ಎನ್. ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...