Thursday, March 19, 2026
Thursday, March 19, 2026

Atma Yojana ಆತ್ಮ ಯೋಜನೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

Date:

Atma Yojana ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ.

45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿದ್ದು, 1 ವರ್ಷದ ಅನುಭವ, ಕಂಪ್ಯೂಟರ್ ಸಾಕ್ಷರತೆ ಹೊಂದಿರಬೇಕು. ಅರ್ಜಿಯೊಂದಿಗೆ ಸ್ನಾತಕ/ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ ಲಗತ್ತಿಸಬೇಕು.

Atma Yojana ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ನಿರ್ದೇಶಕರು, ಶಿವಮೊಗ್ಗ ಇವರ ಕಚೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ದಿನಾಂಕ: 21-07-2025 ರೊಳಗೆ ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ 577202 ಇಲ್ಲಿಗೆ ಸಲ್ಲಿಸಬಹುದೆಂದು ಕೃಷಿ ಜಂಟಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು(ಆತ್ಮ) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...