Sunday, August 2, 2026
Sunday, August 2, 2026

Eshwara Khandre ಬುಕ್ಕಾಪಟ್ಟಣ ವನ್ಯಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆ – ಸಚಿವ ಈಶ್ವರ ಖಂಡ್ರೆ

Date:

Eshwara Khandre ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ.

ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದಿದ್ದಾರೆ.

Eshwara Khandre ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅರಣ್ಯ ಸಚಿವ ಈಶ್ವರ‌ಖಂಡ್ರೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...