Sunday, June 21, 2026
Sunday, June 21, 2026

Department of Health ಹೃದಯಾಘಾತ ಸರಣಿ ಸಾವು, ತಾಂತ್ರಿಕ ಸಲಹಾ ಸಮಿತಿ ವರದಿ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

Date:

Department of Health ರಾಜ್ಯದಲ್ಲಿ ಹೃಯಾಘಾತದಿಂದ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ಅಧ್ಯಯನ ನಡೆಸಿದೆ. ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ವರದಿ ತಯಾರಿಸಿ , ಇದೀಗ ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಜಯದೇವ ಆಸ್ಪತ್ರೆ ನಿರ್ದೇಶಕ ರವೀಂದ್ರನಾಥ್ ನೇತೃತ್ವದ ಸಮಿತಿ, 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಿತ್ತು. ಅದರಲ್ಲೂ ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಿದ್ದರು. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿತ್ತು. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು. ಜೊತೆಗೆ 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿತ್ತು.

Department of Health ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 218 ಜನ ಪುರುಷರಿದ್ದು, 33 ಮಹಿಳೆಯರನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೊವಿಡ್ ಸೋಂಕೊನ ಹಿನ್ನೆಲೆ ಇತ್ತು. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ ಎಂದು ಹೇಳಲಾಗಿದೆ. ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...