Shivamogga Cycle Club ಪರಿಸರ ಸಂರಕ್ಷಣೆ ಮತ್ತು ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸುತ್ತಿರುವ ತುಮಕೂರಿನ ಪರಿಸರ ಪ್ರೇಮಿ ಮಹಾಲಿಂಗ ಅವರಿಗೆ ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ. ಗೌರವಿಸಲಾಯಿತು.
ಶಿವಮೊಗ್ಗ ಸೈಕಲ್ ಕ್ಲಬ್ ಪ್ರಮುಖರಾದ ನರಸಿಂಹಮೂರ್ತಿ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಎಲ್ಲರೂ ಪರಿಸರ ರಕ್ಷಣೆಗೆ ಪೂರಕವಾದ ರೀತಿಯಲ್ಲಿ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಸೈಕಲ್ ತುಳಿಯುವುದರಿಂದ ದೇಹ ಹಾಗೂ ಮಾನಸಿಕ ಸದೃಢತೆ ವೃದ್ಧಿಸುತ್ತದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತದೆ. ಶಿವಮೊಗ್ಗ ಸೈಕಲ್ ಕ್ಲಬ್ ನ 50ಕ್ಕೂ ಹೆಚ್ಚು ಜನ ಸದಸ್ಯರು ಗಿನ್ನೆಸ್ ಹಾಗೂ ಲಿಮ್ಕಾ ಪ್ರಶಸ್ತಿ ಪುರಸ್ಕೃತರು ಇದ್ದಾರೆ. ಕರ್ನಾಟಕದಲ್ಲಿ ಒಂದು ಮಾದರಿ ಸೈಕಲ್ ಕ್ಲಬ್ ಆಗಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಪೀಳಿಗೆಗೆ ಸುಂದರವಾದ ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು.
Shivamogga Cycle Club ಈಗಾಗಲೇ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಪ್ರವಾಸ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ನೀಡಿ ಜಿಲ್ಲಾಡಳಿತವನ್ನು ಒತ್ತಾಯಿಸುತ್ತಿದ್ದೇವೆ ಎಂದು ತುಮಕೂರಿನ ಪರಿಸರ ಪ್ರೇಮಿ ಮಹಾಲಿಂಗ ತಿಳಿಸಿದರು.
ಪ್ರಮುಖರಾದ ಮನೋಜ್, ನರಸಿಂಹಮೂರ್ತಿ, ಮಂಜು ಜಾವಳ್ಳಿ, ವಿಘ್ನೇಶ್, ಪ್ರಕಾಶ್ ಮತ್ತಿತರರು ಇದ್ದರು.
