Rotary Shimoga ಪ್ರತಿ ನಿತ್ಯ ಸಾವಿರಾರು ಜನರು ಅಪಘಾತಗಳಿಂದ ಸಾವನ್ನಪ್ಪುತ್ತಿದ್ದು, ರಸ್ತೆ ಸಂಚಾರ ನಿಯಮಗಳ ಪಾಲನೆ ಮಾಡದಿರುವುದು ಸಹ ಒಂದು ಕಾರಣವಾಗಿದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ನಗರದ ಬಿಹೆಚ್ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅಳವಡಿಸಿದ ಜಾಗೃತಿ ನಾಮಫಲಕ ಉದ್ಘಾಟಿಸಿ ಮಾತನಾಡಿ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಹಾಗೂ ಹೆಲ್ಮೆಟ್ ಧರಿಸದೆ ಗಾಡಿ ಚಲಾಯಿಸುವುದು, ಯುವಕರು ವೀಲ್ಹಿಂಗ್ ಮಾಡುವುದು ಮತ್ತು ಓವರ್ ಸ್ಪೀಡ್‌ನಿಂದ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಈ ವರ್ಷ ರೋಟರಿಯು ರಸ್ತೆ ಸುರಕ್ಷತೆ ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.
ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ರಸ್ತೆ ಸಂಚಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿ ಅವರಿಂದ ಪ್ರಾತ್ಯಕ್ಷತೆ ಮಾಡಿಸಬೇಕು. ಅವರ ಮನಸ್ಸಿನಲ್ಲಿ ಇಂತಹ ಕಾರ್ಯಕ್ರಮಗಳು ಉಳಿಯುವುದರಿಂದ ಪೋಷಕರಿಗೆ ಅರಿವು ಮೂಡಿಸುತ್ತಾರೆ ಎಂದು ನುಡಿದರು.
ರೋಟರಿ ಶಿವಮೊಗ್ಗ ಪೂರ್ವದ ನೂತನ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಮಾತನಾಡಿ, ರೋಟರಿ ಜಿಲ್ಲಾ ಯೋಜನೆಗಳಲ್ಲಿ ಒಂದಾದ ರಸ್ತೆ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರ ಮುಖಾಂತರ ವರ್ಷದ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.
Rotary Shimoga ಸಂಚಾರಿ ಠಾಣೆಯ ಇನ್ಸೆಪೆಕ್ಟರ್ ತಿರುಮಲೇಶ್ ಮಾತನಾಡಿ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಯುವಜನತೆ ಅರಿತುಕೊಳ್ಳಬೇಕು ಎಂದು ತಿಳಿಸಿದರು. ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಲಯ ಸೇನಾನಿ ಕಿರಣ್ ಕುಮಾರ್, ಅರುಣ್ ದೀಕ್ಷಿತ್, ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಮಾಜಿ ಅಧ್ಯಕ್ಷರಾದ ಎನ್.ಹೆಚ್.ಶ್ರೀಕಾಂತ್, ಓ.ಮಹೇಶ್, ಮಂಜುನಾಥ್, ಲಕ್ಷ್ಮಣ್, ಮಂಜುನಾಥ್ ರಾವ್ ಕದಂ, ಡಾ. ರವಿಕಿರಣ್ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
