CM Siddaramaiah ದೆಹಲಿ ಮಟ್ಟದಲ್ಲಿ ‘ಸೀಎಂ’ ಬದಲಾವಣೆ ಚರ್ಚೆಯೇ ಆಗಿಲ್ಲ. ಎಲ್ಲಾ ಮಾಧ್ಯಮಗಳ ಊಹೆ – ಸಿದ್ಧರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ಕುರಿತಲ್ಲ. ಇದನ್ನು ಸ್ವತಃ ಅವರೇ ಅಲ್ಲಗೆಳೆದ ಮೇಲೆ ಈ ವಿಷಯದ ಬಗ್ಗೆ ಊಹಾಪೋಹಗಳಿಗೆ ಆಸ್ಪದವಿಲ್ಲ. ಈ ಊಹಾಪೋಹಗಳು ಮಾಧ್ಯಮಗಳ ಸೃಷ್ಟಿಯಾಗಿರುವುದೇ ಹೊರತು, ಕಾಂಗ್ರೆಸ್ ವಲಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಚರ್ಚೆಯೇ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸದ್ಯ ಎದ್ದಿರುವ ಸೀಎಂ ಬದಲಾವಣೆ ಸುದ್ದಿ ಊಹಾಪೋಹಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.
ಈ ವಿಷಯದ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವನ್ನು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಹಮತಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದು, ವರಿಷ್ಠರ ತೀರ್ಮಾನಕ್ಕೆ ತಲೆಬಾಗುವುದಾಗಿ ನಾವಿಬ್ಬರೂ ಹಲವು ಬಾರಿ ತಿಳಿಸಿದ್ದೇವೆ. ಸರ್ಕಾರಕ್ಕೆ ಎರಡೂವರೆ ವರ್ಷವಾಗಿರುವ ಸಂದರ್ಭದಲ್ಲಿ ಅಧಿಕಾರ ಹಸ್ತಾಂತರದ ವಿಷಯವೇಳುವುದು ಸಹಜ. ಆದರೆ ಈ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ. ಇತ್ತೀಚೆಗಷ್ಟೇ ‘ಐದು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯಲಿದ್ದೇನೆ’ ಎಂದು ಸ್ಪಷ್ಟಪಡಿಸಿದ ಮೇಲೆ ಮಾಧ್ಯಮಗಳಲ್ಲಿ ಇಂತಹ ಗಾಳಿಸುದ್ದಿಗಳು ಏಕೆ ಹಬ್ಬಿಸಲಾಗುತ್ತಿದೆ? ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಗಳ ಸ್ಥಾನ ಖಾಲಿಯಿಲ್ಲವೆಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಪುನರುಚ್ಚರಿಸಿದ್ದೇವೆ. ಕರ್ನಾಟಕದ ಮುಖ್ಯಮಂತ್ರಿ ನಾನೇ. ಡಿ.ಕೆ.ಶಿವಕುಮಾರ್ ಆಗಲಿ ಅಥವಾ ಶಾಸಕರು ಯಾರೇ ಆಗಲಿ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇಟ್ಟುಕೊಂಡಿದ್ದರೆ ಅದರಲ್ಲ ತಪ್ಪೇನಿಲ್ಲ. ಕೆಲವು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆಯೇ ಹೊರತು, ಅದು ಪಕ್ಷದ ತೀರ್ಮಾನವಲ್ಲ. ಅಧಿಕಾರ ಹಸ್ತಾಂತರದ ಊಹೆಗೆ ಯಾವುದೇ ಅರ್ಥವಿಲ್ಲ.
CM Siddaramaiah ದೆಹಲಿ ಮಟ್ಟದಲ್ಲಿ ‘ಸೀಎಂ’ ಬದಲಾವಣೆ ಚರ್ಚೆಯೇ ಆಗಿಲ್ಲ. ಎಲ್ಲಾ ಮಾಧ್ಯಮಗಳ ಊಹೆ – ಸಿದ್ಧರಾಮಯ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ದೆಹಲಿಯ ನನ್ನ ಇಂದಿನ ಭೇಟಿಯಲ್ಲಿ ಯಾವುದೇ ಚರ್ಚೆಯಾಗುವುದಿಲ್ಲ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿಲ್ಲ. ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಇಂದು ಸಂಜೆ ಭೇಟಿ ಮಾಡಿ, ಎಂಎಲ್‌ಸಿ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ
ಸಿದ್ಧರಾಮಯ್ಯ ತಮ್ಮ X ಖಾತೆಯಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ
